ಶಿವಮೊಗ್ಗ: ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳ ವಿರುದ್ಧ ಅಪಮಾನಕರ ಹೇಳಿಕೆ ನೀಡುತ್ತಾ ಪರಿಶಿಷ್ಟ ಜಾತಿಯ ಸಹೋದರ ಸಮುದಾಯಗಳ ಏಕತೆ ಛಿದ್ರಗೊಳಿಸಲು ಹೊರಟಿರುವವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ಕಾರ್ಯಕರ್ತರು ಬುಧವಾರ ನಗರದ ಮುಖ್ಯ ಅಂಚೆ ಕಚೇರಿ ಮುಂದೆ ಪತ್ರ ಚಳವಳಿ ನಡೆಸಿದರು.
ಸುಪ್ರೀಂ ಕೋರ್ಟ್‌ನಲ್ಲಿ ಇಬ್ಬರು ಸಲ್ಲಿಸಿದ ಅರ್ಜಿಯನ್ನು ಸೂಕ್ತ ಪ್ರಾಧಿಕಾರದ ಮುಂದೆ ಹಾಜರುಪಡಿಸುವಂತೆ ಸೂಚನೆ ನೀಡಿ ವಿಲೇವಾರಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ಅಂತ್ಯಗೊಂಡಿದ್ದರೂ, ಸುಪ್ರೀಂಕೋರ್ಟ್ ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಪಟ್ಟಿಯಿಂದಲೇ ಕೈಬಿಡುವಂತೆ ಆದೇಶ ನೀಡಿದೆ ಎಂದು ತಪ್ಪು ಮಾಹಿತಿ ಹಬ್ಬಿಸಲಾಗಿದೆ. ಆ ಮೂಲಕ ಸಮಾಜದಲ್ಲಿ ಸಂಘರ್ಷ ಸೃಷ್ಟಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗೆ ಬರೆದ ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕಿದರು.
ಶಾಸಕ ಕೆ.ಬಿ.ಅಶೋಕ್ ನಾಯ್ಕ, ಸಂಘದ ಅಧ್ಯಕ್ಷ ಡಿ.ಆರ್. ಗಿರೀಶ್, ಪದಾಧಿಕಾರಿಗಳಾದ ಕುಮಾರ್ ನಾಯ್ಕ, ಉಮಾಮಹೇಶ್ವರ ನಾಯ್ಕ, ಜಗದೀಶ್ ನಾಯ್ಕ, ದೇವರಾಜ್ ಮಂಡೇನಕೊಪ್ಪ, ತಿಮ್ಮಾ ನಾಯ್ಕ, ಮಾಲಾ ಬಾಯಿ ಚಳವಳಿಯ ನೇತೃತ್ವ ವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.