ಮಂಗಳವಾರ, ಮೇ 18, 2021
22 °C

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಹಗರಣ ಸಿಬಿಐಗೆ ವಹಿಸಲು ಕೋರಿ ಸರ್ಕಾರಕ್ಕೆ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಗಾಂಧಿ ಬಜಾರ್ ಶಾಖೆಯಲ್ಲಿ 2014ರಲ್ಲಿ ನಡೆದ ₹ 62.77 ಕೋಟಿ ಬಂಗಾರ ಅಡಮಾನ ಸಾಲದ ಹಗರಣವನ್ನು ಸಿಬಿಐಗೆ ವಹಿಸಲು ಕೋರಿ ಬ್ಯಾಂಕ್‌ನ ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿದೆ.

ಹಗರಣದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಸೇರಿ 18 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಸಿಐಡಿ ತನಿಖೆ ನಡೆದು ಮಂಜುನಾಥ್ ಗೌಡರನ್ನು ಆರೋಪಮುಕ್ತಗೊಳಿಸಲಾಗಿತ್ತು. ಸಿಐಡಿ ಅಧಿಕಾರಿಗಳು ನಡೆಸಿದ ತನಿಖೆ ಸಮರ್ಪಕವಾಗಿಲ್ಲ ಎನ್ನುವ ಭಾವನೆ ಇದೆ. ಹಾಗಾಗಿ, ಕೂಲಂಕಷ ತನಿಖೆಗಾಗಿ ಸಿಬಿಐಗೆ ವಹಿಸಲು ಆಡಳಿತ ಮಂಡಳಿ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಉಳಿದ 17 ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಡಿಸಿಸಿ ಬ್ಯಾಂಕ್‌ ರಾಜ್ಯದ ಬಿಜಾಪುರ, ಬಾಗಲಕೋಟೆ, ಚನ್ನರಾಯಪಟ್ಟಣದ ಸಕ್ಕರೆ ಕಾರ್ಖಾನೆಗಳಿಗೆ ಸುಮಾರು ₹ 90 ಕೋಟಿ ಸಾಲ ನೀಡಿದೆ. ಹಿಂದಿನ ಆಡಳಿತ ಮಂಡಳಿ ನಿಯಮ ಬಾಹಿರವಾಗಿ ನೀಡಿದೆ ಎಂದು ಬ್ಯಾಂಕಿನ 11 ನಿರ್ದೇಶಕರು ದೂರು ನೀಡಿದ್ದಾರೆ. ಈ ಕುರಿತು ತನಿಖೆಗೆ ಒತ್ತಾಯಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲೇ ನಿರ್ದೇಶಕರಾದ ದುಗ್ಗಪ್ಪಗೌಡ, ಯೋಗೀಶ್, ಎಸ್.ಪಿ.ದಿನೇಶ್ ಪರಸ್ಪರ ವಾಗ್ವಾದ ನಡೆಸಿದರು. ಆರೋಪ, ಪ್ರತ್ಯಾರೋಪಗಳೂ ನಡೆದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು