ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುರಸ್ತಿ ವೇಳೆ ವಿದ್ಯುತ್ ತಗುಲಿ ಲೈನ್‌ಮ್ಯಾನ್ ಸಾವು

Published 24 ಸೆಪ್ಟೆಂಬರ್ 2023, 14:37 IST
Last Updated 24 ಸೆಪ್ಟೆಂಬರ್ 2023, 14:37 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಮಾಚೇನಹಳ್ಳಿ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ವಿದ್ಯುತ್ ಕಂಬದ ದುರಸ್ತಿ ಕಾರ್ಯದ ವೇಳೆ ವಿದ್ಯುತ್ ತಗುಲಿ ಲೈನ್‌ಮ್ಯಾನ್‌ವೊಬ್ಬರು ಮೃತಪಟ್ಟಿದ್ದಾರೆ.

ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದ ಮೊದಲ ಅಡ್ಡ ರಸ್ತೆಯಲ್ಲಿ ವಿದ್ಯುತ್‌ ಕಂಬದ ದುರಸ್ತಿಗಾಗಿ ಲೈನ್‌ಮ್ಯಾನ್‌ಗಳಾದ ಕಿರಣ್ ಹಾಗೂ ಸುನಿಲ್ ತೆರಳಿದ್ದರು.

ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನಲ್ಲೂರಿನ ಕಿರಣ್ (25) ಮೃತಪಟ್ಟಿದ್ದಾರೆ. ಸುನಿಲ್ ಗಾಯಗೊಂಡಿದ್ದಾರೆ. ಜೋರು ಶಬ್ದ ಕೇಳಿ ಹೊರಗೆ ಬಂದ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇಬ್ಬರನ್ನೂ ಆಂಬುಲೆನ್ಸ್‌ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯದರು. ಕಿರಣ್ ಅಷ್ಟರಲ್ಲೇ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT