ಕಾರ್ಗಲ್: ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ಸಂಗ್ರಹವಿರುವ ನೀರಿನ ಪ್ರಮಾಣ ಕಡಿಮೆಯಾಗಿದ್ದು, 20 ಟಿಎಂಸಿ ಅಡಿಗೆ ಕುಸಿದಿದೆ ಎಂದು ಕೆಪಿಸಿ ಅದೀಕ್ಷಕ ಎಂಜಿನಿಯರ್ ಆರ್. ಶಿವಕುಮಾರ್ ಮಾಹಿತಿ ನೀಡಿದರು.

ಸಮುದ್ರ ಮಟ್ಟದಿಂದ 1,819 ಅಡಿ ಗರಿಷ್ಠ ಮಟ್ಟದ ಸಂಗ್ರಹವಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಪ್ರಸಕ್ತ ಸಂಗ್ರಹ ಪ್ರಮಾಣ 1,752 ಅಡಿಗೆ ತಲುಪಿದೆ. ಇನ್ನು 10 ಅಡಿ ನೀರು ಕಡಿಮೆಯಾದರೆ ಲಿಂಗನಮಕ್ಕಿ ಜಲ ವಿದ್ಯುದಾಗರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸುವುದು ಅನಿವಾರ್ಯವಾಗಲಿದೆ.

ಪ್ರತಿದಿನ 6,000 ಕ್ಯೂಸೆಕ್ ನೀರು ಜಲಾಶಯದಿಂದ ವಿದ್ಯುತ್ ಉತ್ಪಾದನೆಗೆಂದು ಹೊರ ಹರಿಯುತ್ತಿದೆ. ಕಳೆದ ವರ್ಷ ಮೇ 16ರಂದು ಮಳೆಗಾಲ ಆರಂಭವಾಗಿ ಜಲಾಶಯಕ್ಕೆ ಉತ್ತಮ ಒಳಹರಿವು ಬಂದಿತ್ತು. ಆದರೆ, ಈ ಸಾಲಿನಲ್ಲಿ ಮುಂಗಾರು ಪೂರ್ವ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯದ ನೀರಿನ ಸಂಗ್ರಹದ ಮೇಲೆ ಪರಿಣಾಮ ಬೀರಲಿದೆ ಎಂದು ಅವರು ತಿಳಿಸಿದರು.

ಲಿಂಗನಮಕ್ಕಿ ಜಲ ವಿದ್ಯುದಾಗರದಲ್ಲಿರುವ 2 ಘಟಕಗಳ ಪೈಕಿ 1 ಘಟಕ ಕಾರ್ಯ ನಿರ್ವಹಿಸುತ್ತಿದ್ದು, ಮತ್ತೊಂದು ಘಟಕದ ದುರಸ್ತಿ ಕಾರ್ಯ ಸದ್ಯದಲ್ಲಿಯೇ ಮುಗಿದು ವಿದ್ಯುತ್ ಉತ್ಪಾದನೆಯಲ್ಲಿ ತೊಡಗುವ ಸಾಧ್ಯತೆ ಇದೆ ಎಂದರು.

ಲಿಂಗನಮಕ್ಕಿ ಜಲಾಶಯದ ನೀರು ಜಲವಿದ್ಯುತ್ ಉತ್ಪಾದನೆಗೆ ಬಳಕೆಯಾಗುತ್ತಿದ್ದು, ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲಿ ಒಟ್ಟು 24 ವಿದ್ಯುತ್ ಉತ್ಪಾದನಾ ಘಟಕಗಳಿಗೆ ನೀರು ಪೂರೈಸುತ್ತಿದೆ. ಕಾರ್ಗಲ್, ಜೋಗ, ಲಿಂಗನಮಕ್ಕಿ ಮತ್ತು ಸಾಗರ ಪಟ್ಟಣಕ್ಕೆ ಕುಡಿಯುವ ನೀರಿಗೂ ಜಲಾಶಯದ ನೀರೇ ಆಸರೆಯಾಗಿದ್ದು, ಸಿದ್ದಾಪುರ ಪಟ್ಟಣಕ್ಕೆ ನೀರು ಪೂರೈಸುವ ಕಾಮಗಾರಿ ಚಾಲನೆಯಲ್ಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-1589780112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.