ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹10 ಕೋಟಿ ವೆಚ್ಚದಲ್ಲಿ ಸಿಂಹಧಾಮ ಅಭಿವೃದ್ಧಿ: ಬಿ.ವೈ.ರಾಘವೇಂದ್ರ

Last Updated 16 ಡಿಸೆಂಬರ್ 2020, 13:53 IST
ಅಕ್ಷರ ಗಾತ್ರ

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ-ಸಿಂಹಧಾಮವನ್ನು ₹10 ಕೋಟಿ ವೆಚ್ಚದಲ್ಲಿ ಆಕರ್ಷಣೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಹುಲಿ–ಸಿಂಹಧಾಮಕ್ಕೆ ಬುಧವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಸಿಂಹಧಾಮದ ಅಭಿವೃದ್ಧಿಗೆ ಯೋಜನೆ ರೂಪಿಸಿ, ಭಾರತೀಯ ಮೃಗಾಲಯ ಪ್ರಾಧಿಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.600 ಎಕರೆ ವಿಸ್ತೀರ್ಣ ಹೊಂದಿರುವ ಸಿಂಹಧಾಮದಲ್ಲಿ 120 ಹೆಕ್ಟೇರ್ ಪ್ರದೇಶದ ಅಭಿವೃದ್ಧಿಗೆ ಒಪ್ಪಿಗೆ ಸಿಕ್ಕಿದೆ. ರಾಜ್ಯ ಸರ್ಕಾರ, ಕೇಂದ್ರ ಮೃಗಾಲಯ ಪ್ರಾಧಿಕಾರ ತಲಾ ₹ 5 ಕೋಟಿ ನೀಡಿವೆ. ಮೈಸೂರು ಮೃಗಾಲಯದಿಂದಲೂ ಅನುದಾನ ಪಡೆಯಲಾಗುವುದು ಎಂದರು.

ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಸಕ್ರೆಬೈಲು ಆನೆಬಿಡಾರದ ಅಭಿವೃದ್ಧಿಗೆ ₹ 20 ಕೋಟಿ ಅನುದಾನಕ್ಕೆ ಒಪ್ಪಿಗೆ ಸಿಕ್ಕಿದೆ. ಅಲ್ಲಿರುವ ನೈಸರ್ಗಿಕ ದ್ವೀಪಕ್ಕೆ ಹೋಗಿ ಬರಲು ಬೋಟಿಂಗ್ ವ್ಯವಸ್ಥೆ ಮಾಡಲಾಗುವುದು. ಸಫಾರಿಗೂ ವ್ಯವಸ್ಥೆ ಕಲ್ಪಿಸಲಾಗುವುದು. ಜೋಗ್‌ಫಾಲ್ಸ್ ವ್ಯಾಪ್ತಿಯಲ್ಲಿ ₹ 130 ಕೋಟಿ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದರು.

ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ನೀರಾನೆ, ಕಾಡುಕೋಣ ಮತ್ತಿತರ ಪ್ರಾಣಿ, ಪಕ್ಷಿಗಳ ಅನುಕೂಲಕ್ಕೆ ವ್ಯವಸ್ಥೆ ಮಾಡಲಾಗುವುದು. ಹೆಚ್ಚಿನ ಪ್ರಾಣಿಗಳನ್ನು ತರಲಾಗುವುದು. ನೀಲಗಿರಿ ತೆರವುಗೊಳಿಸಿ, ಅರಣ್ಯ ಸ್ನೇಹಿ ಮರಗಳನ್ನು ಬೆಳೆಸಲಾಗುವುದು. ಈಗಾಗಲೇ ಪಾಲಿಕೆ ನೀರಿನ ವ್ಯವಸ್ಥೆ ಕಲ್ಪಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT