ಶಿವಮೊಗ್ಗ: ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಜೆ.ಗಿರೀಶ್ ಮತ್ತು ಡಾ.ಬಿ.ಇ. ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ.

ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ವಿಶ್ವದ ವಿಜ್ಞಾನಿಗಳ ಡೇಟಾಬೇಸ್ ಅ.19ರಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಲಭ್ಯವಿದೆ.

ಸಂಶೋಧನಾ ತಂಡವು ವಿಶ್ವದ ಸಂಶೋಧಕರು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಎಚ್–ಇಂಡೆಕ್ಸ್ ಸೇರಿ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಾಗತಿಕವಾಗಿ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಿದೆ. ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪವಿಜ್ಞಾನ ವಿಷಯಗಳನ್ನು ಒಳಗೊಂಡಿವೆ. ಜೀವಮಾನ ಸಾಧಕರು ಮತ್ತು 2021ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳನ್ನು ಒಳಗೊಂಡಿವೆ.

2021ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನವನ್ನು ಪಡೆದಿರುವ ವಿ.ವಿಯ ಗಣಿತ ವಿಜ್ಞಾನ ಸಹಪ್ರಾಧ್ಯಾಪಕ ಡಾ. ಬಿ.ಜೆ.ಗಿರೀಶ್ ಅವರು ಎಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಷಯಗಳ
ಕುರಿತ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಔದ್ಯೋಗಿಕ ರಸಾಯನ ವಿಜ್ಞಾನ ವಿಭಾಗದ ಸಹ ಪ್ರಧ್ಯಾಪಕ ಡಾ.ಬಿ.ಇ.ಕುಮಾರಸ್ವಾಮಿ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಈ ವರ್ಷದ ಪಟ್ಟಿಯಲ್ಲಿ ಭಾರತದ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ 2042 ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ 1,900 ವಿಜ್ಞಾನಿಗಳು ಸ್ಥಾನ ಪಡೆದಿದ್ದರು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ 114 ವಿಜ್ಞಾನಿಗಳು ಈ ಪಟ್ಟಿಯಲ್ಲಿದ್ದಾರೆ.

ಕೆಲವು ವರ್ಷಗಳಿಂದ ವಿ.ವಿ.ಯ ಸಂಶೋಧನಾ ಸಾಧನೆಗೆ ಪೂರಕವಾದ ಕಾರ್ಯನಿರ್ವಹಿಸುತ್ತಿರುವ ಈ ಇಬ್ಬರು ಅಧ್ಯಾಪಕರ ಸಾಧನೆಯು ಕುವೆಂಪು ವಿಶ್ವವಿದ್ಯಾಲಯಕ್ಕೆ ಹೆಮ್ಮೆ ತಂದಿದೆ ಎಂದು ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ.ಅನುರಾಧ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.