ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಳಕೊಪ್ಪ | ಜಾನುವಾರು ಅಕ್ರಮ ಸಾಗಣೆ: 10 ಜನರ ವಿರುದ್ಧ ಪ್ರಕರಣ

Published 29 ಮಾರ್ಚ್ 2024, 16:05 IST
Last Updated 29 ಮಾರ್ಚ್ 2024, 16:05 IST
ಅಕ್ಷರ ಗಾತ್ರ

ಶಿರಾಳಕೊಪ್ಪ: ಸಮೀಪದ ತೊಗರ್ಸಿ ಗ್ರಾಮದ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವಾಹನಗಳನ್ನು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆ ಸಂಬಂಧ 10ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 4 ಟಾಟಾ ಏಸ್‌, 3 ಅಶೋಕ ಲೈಲ್ಯಾಂಡ್‌, 1 ಬೊಲೆರೋ ಪಿಕಪ್‌ ಸೇರಿ ಒಟ್ಟು 7 ಗಾಡಿಗಳಲ್ಲಿ 18 ಎಮ್ಮೆ, 37 ಹಸು ಹಾಗೂ 4 ಕರುಗಳನ್ನು ರಕ್ಷಿಸಿ ಹಾವೇರಿ ಜಿಲ್ಲೆಯ ಸಂಗೂರಿನ ಗೋ ಶಾಲೆಗೆ ರವಾನಿಸಲಾಗಿದೆ. 3 ಒಂಟೆಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT