ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ವೈ.ರಾಘವೇಂದ್ರಗೆ ಗೆಲುವು: ಸೊರಬದಲ್ಲಿ ವಿಜಯೋತ್ಸವ

Published 4 ಜೂನ್ 2024, 14:25 IST
Last Updated 4 ಜೂನ್ 2024, 14:25 IST
ಅಕ್ಷರ ಗಾತ್ರ

ಸೊರಬ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಗೆಲುವು ಕಂಡ ಹಿನ್ನೆಲೆಯಲ್ಲಿ ಬಿಜೆಪಿ ತಾಲ್ಲೂಕು ಘಟಕದ ಕಾರ್ಯಕರ್ತರು ಇಲ್ಲಿ ಮಂಗಳವಾರ ವಿಜಯೋತ್ಸವ ಆಚರಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಎಂ.ಡಿ. ಉಮೇಶ್ ಮಾತನಾಡಿ, ‘10 ವರ್ಷಗಳ ಆಡಳಿತಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಅವರು ಕ್ಷೇತ್ರದಲ್ಲಿ ಮಾಡಿರುವ ಉತ್ತಮ ಕಾರ್ಯವನ್ನು ಮೆಚ್ಚಿ ಜಿಲ್ಲೆಯ ಮತದಾರರು ಬಿಜೆಪಿಗೆ ಮತ ನೀಡಿದ್ದಾರೆ’ ಎಂದರು.

ಜಿಲ್ಲೆಯ ಜನರು ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ರಾಘವೇಂದ್ರ ಅವರು ಉತ್ತಮ ಆಡಳಿತ ನೀಡುವ ಮೂಲಕ ಮತದಾರರ ಋಣ ತೀರಿಸುವರು ಎಂದು ತಿಳಿಸಿದರು.

ಜಾನಕಪ್ಪ, ಟೇಕಪ್ಪ, ಮಂಜಪ್ಪ, ಸುಧೀರ್ ಪೈ, ಗುರುಮೂರ್ತಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT