ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಮತ ಹಾಕಿದವರಿಗೆ ಕಿರೀಟ ಧಾರಣೆಗೆ ಅವಕಾಶ!

Published 7 ಮೇ 2024, 5:21 IST
Last Updated 7 ಮೇ 2024, 5:21 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯ್ತಿ ಆಡಳಿತ ಕಚೇರಿಯ ಮತಗಟ್ಟೆ ಸಂಖ್ಯೆ 283ನ್ನು ಅರಮನೆ ಮಾದರಿಯಲ್ಲಿಉ ವಿನ್ಯಾಸಗೊಳಿಸಲಾಗಿದೆ. ಇದು ಎಲ್ಲರ ಗಮನ ಸೆಳೆಯುತ್ತಿದೆ.

ಮತಗಟ್ಟೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ರಾಜ-ರಾಣಿಯ ಪೋಷಾಕಿನಲ್ಲಿ ಗಮನ ಸೆಳೆಯುತ್ತಿದ್ದಾರೆ.

ಮತ ಹಾಕಿದ ನಂತರ ಮತದಾರರು ಕಿರೀಟ ಧರಿಸಿ, ಸಿಂಹಾಸನದಲ್ಲಿ ಕುಳಿತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು, ಫೋಟೊ ತೆಗೆಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಉ ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾರಾಜರು ಎಂಬ ಆಶಯದೊಂದಿಗೆ ಈ ವ್ಯವಸ್ಥೆ ಮಾಡಲಾಗಿದೆ ಎಂದು ಮತಗಟ್ಟೆ ಸಿಬ್ಬಂದಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT