ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್ 27ಕ್ಕೆ ಲೋಕ್‌ ಅದಾಲತ್

Last Updated 25 ಫೆಬ್ರುವರಿ 2021, 13:41 IST
ಅಕ್ಷರ ಗಾತ್ರ

ಶಿವಮೊಗ್ಗ: ಈ ವರ್ಷದ ಪ್ರಥಮ ಲೋಕ್‌ಅದಾಲತ್ ಮಾರ್ಚ್ 27ರಂದು ನಡೆಯಲಿದೆ ಎಂದು ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶಎಸ್.ಎ. ಮುಸ್ತಫಾ ಹುಸೇನ್‌ ಮಾಹಿತಿ ನೀಡಿದರು.

ಜಿಲ್ಲೆಯ ನ್ಯಾಯಾಲಯಗಳಲ್ಲಿ 50,204 ಪ್ರಕರಣಗಳು ಬಾಕಿ ಇವೆ. 26,078 ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣ. ಇದುವರೆಗೆ 2,730 ಪ್ರಕರಣಗಳನ್ನು ಲೋಕ್‌ ಅದಾಲತ್‍ಗಾಗಿ ಗುರುತಿಸಲಾಗಿದೆ. ಇನ್ನಷ್ಟು ಪ್ರಕರಣಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಮೆಗಾ ಲೋಕ ಅದಾಲತ್‍ಗಾಗಿ 13,138 ಪ್ರಕರಣಗಳನ್ನು ಗುರುತಿಸಲಾಗಿತ್ತು. 7,551 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು.

ಸಂತ್ರಸ್ತರಿಗೆ ಪರಿಹಾರ ಯೋಜನೆ:

ಮತ್ತೊಬ್ಬರ ಅಪರಾಧ ಕೃತ್ಯದಿಂದ ಮರಣ, ಅತ್ಯಾಚಾರ, ಆಸಿಡ್ ದಾಳಿ ಇತರ ಯಾವುದೆ ನೊಂದ ವ್ಯಕ್ತಿಗಳಿಗೆ ಪರಿಹಾರ ನೀಡಲುಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಿಚಾರಣೆ ನಡೆಸುತ್ತಿದೆ. ಜಿಲ್ಲೆಯಲ್ಲಿ 2014ರಿಂದ ಇಲ್ಲಿಯವರೆಗೆ 292 ಪ್ರಕರಣಗಳು ದಾಖಲಾಗಿವೆ. 288 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 170 ಪ್ರಕರಣಗಳಲ್ಲಿ ₹ 4.24 ಕೋಟಿ ಪರಿಹಾರ ಒದಗಿಸಲಾಗಿದೆ. ನೊಂದ ವ್ಯಕ್ತಿಗಳು ಅರ್ಜಿ ಸಲ್ಲಿಸಿ, ಸೂಕ್ತ ಪರಿಹಾರ ಪಡೆಯಬಹುದಾಗಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್‌.ಸರಸ್ವತಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT