ಶಿವಮೊಗ್ಗ: ಇಲ್ಲಿನ ಶಿವಮೊಗ್ಗ ವೈದ್ಯಕೀಯ ಸಂಸ್ಥೆಯ (ಸಿಮ್ಸ್) ನಿರ್ದೇಶಕ ಡಾ.ವಿರೂಪಾಕ್ಷಪ್ಪ ಅವರ ಆಪ್ತ ಸಹಾಯಕ ಸಿ.ಎನ್.ಲಕ್ಷ್ಮೀಪತಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.

ಇಲ್ಲಿನ ಜೆ.ಎಚ್.ಪಟೇಲ್ ಬಡಾವಣೆಯಲ್ಲಿರುವ ಲಕ್ಷ್ಮೀಪತಿ ಅವರ ನಿವಾಸ, ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿರುವ ಮನೆ, ಸಿಮ್ಸ್ನ ಕಚೇರಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
.Lokayukta Raid: ಬೆಂಗಳೂರು ಸೇರಿ ರಾಜ್ಯದ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ.
ಹುಬ್ಬಳ್ಳಿಯ ಕಿಮ್ಸ್ನಲ್ಲಿ ಲ್ಯಾಬ್ ಟೆಕ್ನೀಶಿಯನ್ ಆಗಿದ್ದ ಲಕ್ಷ್ಮೀಪತಿ 2019ರಲ್ಲಿ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕ ಆಗಿ ನೇಮಕಗೊಂಡಿದ್ದರು.

'ಲಕ್ಷ್ನೀಪತಿ ಅವರಿಗೆ ಸಂಬಂಧಿಸಿದ ದಾಖಲೆಗಳು ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ ಅವರ ಮನೆಯಲ್ಲೂ ಇರಬಹುದು ಎಂಬ ಮಾಹಿತಿ ಹಿನ್ನಲೆಯಲ್ಲಿ ಅವರ ನಿವಾಸದಲ್ಲೂ ತಪಾಸಣೆ ನಡೆಸಲಾಗಿದೆ. ಸದ್ಯ ಲಕ್ಷ್ಮೀಪತಿ ನಿವಾಸದಲ್ಲಿ ₹12ಲಕ್ಷ ನಗದು ದೊರೆತಿದೆ. ತಪಾಸಣೆ ಮುಂದುವರೆದಿದೆ' ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
.ಮಡಿಕೇರಿ: ಲೋಕೋಪಯೋಗಿ ಇಲಾಖೆಯ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ.ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ ಸುಭಾಷ್ ನಾಟಿಕರ್ ಮನೆಗೆ ಲೋಕಾಯುಕ್ತ ದಾಳಿ.ದಾವಣಗೆರೆ: ಎಪಿಎಂಸಿ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ.ಬೀದರ್: ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರ ಶೋಧ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.