ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ನೆಲ, ಜಲ, ಭಾಷೆಗೆ ಕಟಿ ಬದ್ಧರಾಗಿ: ಸಚಿವ ಮಧು ಬಂಗಾರಪ್ಪ

Published 1 ಫೆಬ್ರುವರಿ 2024, 14:13 IST
Last Updated 1 ಫೆಬ್ರುವರಿ 2024, 14:13 IST
ಅಕ್ಷರ ಗಾತ್ರ

ಸೊರಬ: ‘ಕನ್ನಡ ನಾಡಿನ ನೆಲ, ಜಲ ಹಾಗೂ ಭಾಷೆಯ ಭಾವೈಕ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಸೈನಿಕರ ರೀತಿ ಕಟಿ ಬದ್ಧರಾಗಿ ಹೋರಾಡುವ ಅಗತ್ಯವಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ‘ಕನ್ನಡ ನುಡಿ ಹಬ್ಬ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ತಂದೆ ಬಂಗಾರಪ್ಪ ಅವರು ಕನ್ನಡ ನಾಡು ನುಡಿ ಭಾಷೆಯ ಬಗ್ಗೆ ಅಪಾರವಾದ ಅಭಿಮಾನ ಹೊಂದಿದ್ದರು. ಕಾವೇರಿ ನದಿ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದರು. ನಿತ್ಯ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು. ನನ್ನ ಅಧಿಕಾರದ ಅವಧಿಯಲ್ಲಿ ಕನ್ನಡಕ್ಕೆ ಒತ್ತು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದರು.

ಇದಕ್ಕೂ ಮೊದಲು ‌ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಲೀಂದ್ರಪ್ಪ ಚಿಕ್ಕಾವಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಿರುತೆರೆ ನಟಿ ರಮಲಾ, ಮುಖಂಡರಾದ ತಬಲಿ ಬಂಗಾರಪ್ಪ, ಗಣಪತಿ, ನಾಗರಾಜ್ ಚಿಕ್ಕಸವಿ, ಕರಿಬಸವಯ್ಯ, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಓಟೂರು, ಎಂ. ಡಿ.ಶೇಖರ್, ಗಿರೀಶ್ ಬಾರ್ಕಿ, ಕೆ.ಪಿ.ರುದ್ರಗೌಡ, ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ಪ್ರಶಾಂತ್ ನಾಯ್ಕ, ವಿಜಯ್ ಕುಮಾರ್, ದಿನೇಶ್, ಯುವರಾಜ್, ಪ್ರಭಾಕರ್ ಶಿಗ್ಗಾ, ನೆಹರೂ ಕೊಡಕಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT