ರಿಪ್ಪನ್ಪೇಟೆ:ಭಗವಾನ್ ಮಹಾವೀರರ ಅಹಿಂಸಾ ತತ್ವ, ಸಂದೇಶಗಳು ಸರ್ವ ಕಾಲಕ್ಕೂ ಪ್ರಸ್ತುತ ಎಂದು ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ಹೊಂಬುಜ ಕ್ಷೇತ್ರದಲ್ಲಿ ಮಹಾವೀರ ಜಯಂತಿ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಕಾಲಮಾನದಲ್ಲಿ ಮಾನವನ ಸಂಕುಚಿತ ಮನೋಭಾವದಿಂದ ಮಾನವೀಯ ಸಂಬಂಧಗಳ ಮೌಲ್ಯ ಕಳೆದುಕೊಳ್ಳುತ್ತಿರುವುದು ಬೇಸರದ ಸಂಗತಿ.ಪ್ರತಿಯೊಬ್ಬ ವ್ಯಕ್ತಿಯೂ ಸದೃಢ ಸಮಾಜ ನಮ್ಮ ಗುರಿಯಾಗಿಸಿಕೊಂಡು ‘ಜೀವಿಸು ಜೀವಿಸಲು ಬಿಡು ’ ಎಂಬ ಮಹಾವೀರರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಯುವ ಸಮೂಹವನ್ನು ಸನ್ಮಾರ್ಗದ ದಿಕ್ಕಿನಲ್ಲಿ ಕರೆದೊಯ್ಯಬೇಕಿದೆ ಎಂದು ಸಲಹೆ ನೀಡಿದರು.

ಮಹಾವೀರ ಜಯಂತಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ನಂತರ ಊರಿನ ಪ್ರಮುಖ ರಸ್ತೆಯಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.