ಶಿವಮೊಗ್ಗ: ಮುಂಡರಗಿಯ ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನವು ಶಿಕ್ಷಕ ದಿನಾಚರಣೆಯ ಅಂಗವಾಗಿ ಕೊಡಮಾಡುವ ‘ಮಕ್ಕಳಸ್ನೇಹಿ ಶಿಕ್ಷಕ’ ರಾಜ್ಯ ಮಟ್ಟದ ಪ್ರಶಸ್ತಿಗೆ ಭದ್ರಾವತಿಯ ಎಸ್.ಲಕ್ಷ್ಮಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಮೊತ್ತ ₹5,000 ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ನಿಂಗು ಸೊಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.