ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗನ ಕಾಯಿಲೆ ನಿಯಂತ್ರಣ: ಮೆಲಾಥಿಯನ್ ಪುಡಿ ಬಳಕೆ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥ

Last Updated 3 ಫೆಬ್ರುವರಿ 2021, 2:48 IST
ಅಕ್ಷರ ಗಾತ್ರ

ಬೆಂಗಳೂರು: ಮಂಗನ ಕಾಯಿಲೆ ಹರಡುವುದನ್ನು ತಡೆಯಲು ಮೆಲಾಥಿಯನ್ ಪುಡಿ ಬಳಕೆ ಮಾಡುವುದರಿಂದ ಆಗಲಿರುವ ತೊಂದರೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ದೂರು ನೀಡಲು ಅರ್ಜಿದಾರರಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಶಿವಮೊಗ್ಗದ ವಕೀಲ ಕೆ.ಪಿ. ಶ್ರೀಪಾಲ್ ಮತ್ತು ಎನ್.ಜಿ. ರಾಮೇಶಪ್ಪ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯನ್ನು ವಿಲೇವಾರಿ ಮಾಡಿತು.

‘ಮಂಗಗಳು ಸತ್ತಾಗ ಅದರ ಸುತ್ತಲೂ ಮೆಲಾಥಿಯನ್ ಪುಡಿ ಸುರಿಯಲಾಗುತ್ತಿದೆ. ಇದರಿಂದ ಇತರ ಪ್ರಾಣಿಗಳ ಆವಾಸಕ್ಕೆ ಹಾನಿಯಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದರು.

‘2018ರ ಡಿಸೆಂಬರ್‌ನಿಂದ ಈಚೆಗೆ ಮಂಗನ ಕಾಯಿಲೆ ಪ್ರಕರಣಗಳು ಕಡಿಮೆಯಾಗುತ್ತಿವೆ’ ಎಂದು ಶಿವಮೊಗ್ಗದ ಸೋಂಕು ಪತ್ತೆ ಪ್ರಯೋಗಾಲಯದ ನಿರ್ದೇಶಕರು ಸಲ್ಲಿಸಿದ್ದ ಅಫಿಡವಿಟ್‌ ಅನ್ನು ಪೀಠ ಪರಿಶೀಲನೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT