ಶಿವಮೊಗ್ಗ: ಫಾರಂನಲ್ಲಿ ಅಧಿಕ ಸಂಖ್ಯೆಯ ಕೋಳಿಗಳು ಮೃತಪಟ್ಟರೂ ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ನಿರ್ಲಕ್ಷ್ಯ ತೋರಿದ ಶಿಕಾರಿಪುರ ಅಂಬರಗೊಪ್ಪ ನಿವಾಸಿ ರಂಗಸ್ವಾಮಿ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.

ತಮ್ಮ ಅಡಿಕೆ ತೋಟದಲ್ಲಿರುವ ಕೋಳಿ ಫಾರಂನಲ್ಲಿ ನೂರಾರು ಕೋಳಿಗಳು ಸತ್ತು ಬಿದ್ದಿದ್ದರೂ, ಅದನ್ನು ಸರಿಯಾಗಿ ವಿಲೇವಾರಿ ಮಾಡದಿರುವುದು ಕಂಡು ಬಂದಿದೆ. ಕೋಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟರೆ ಮಾಹಿತಿ ಒದಗಿಸುವಂತೆ ಈ ಮೊದಲು ಸೂಚನೆ ನೀಡಿದ್ದರೂ, ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಜವಾಬ್ದಾರಿ ಪಾಲಿಸಲು ವಿಫಲರಾಗಿರುವ ಕಾರಣ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.