ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ವ್ಯಕ್ತಿ ಬಂಧನ

Last Updated 28 ಜೂನ್ 2022, 5:12 IST
ಅಕ್ಷರ ಗಾತ್ರ

ಸಾಗರ: ವ್ಯಕ್ತಿಯೊಬ್ಬ ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಭಾನುವಾರ ಸಂಭವಿಸಿದ್ದು, ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸ್ನೇಹಿತ ಮನೆಯಲ್ಲಿ ಇಲ್ಲದ್ದನ್ನು ಅರಿತು ಅವರ ಮನೆಗೆ ಪ್ರವೇಶಿಸಿದ್ದ ವ್ಯಕ್ತಿ, ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ. ಮಹಿಳೆಯು ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಕೂಡಲೇ, ‘ವಿಷಯವನ್ನು ಬೇರೆಯವರಿಗೆ ತಿಳಿಸಿದರೆ ನಿಮ್ಮ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವೆ’ ಎಂದು ಬೆದರಿಕೆ ಹಾಕಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

ಈ ಸಂಬಂಧ ಮಹಿಳೆ ನೀಡಿದ ದೂರನ್ನು ಆಧರಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT