ಶಿವಮೊಗ್ಗ: ಇಲ್ಲಿನ ಸೂಳೆಬೈಲು ಪುಟ್ಟಪ್ಪ ಕ್ಯಾಂಪ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಹೊಳಲೂರಿನ ಸದ್ದಾಂ ಹುಸೇನ್ (30) ಬಂಧಿತ ಆರೋಪಿ. ಆತನಿಂದ ₹20,000 ಮೌಲ್ಯದ 338 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಡಿ.ಸಿ.ಆರ್.ಬಿ ವಿಭಾಗದ ಜಿಲ್ಲಾ ಪೊಲೀಸ್ ಉಪಾಧೀಕ್ಷಕ ಡಿ.ಟಿ.ಪ್ರಭು ಹಾಗೂ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಅಪರಾಧ (ಸಿಇಎನ್) ಪೊಲೀಸ್ ಠಾಣೆಯ ಪಿಐ ದೀಪಕ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.