ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಳಕಳಲೆ ಮಂಕಿ ಪಾರ್ಕ್ ಪ್ರಸ್ತಾವ ವಾಪಸ್‌: ಸಂಸದ ರಾಘವೇಂದ್ರ

Last Updated 9 ಸೆಪ್ಟೆಂಬರ್ 2020, 17:24 IST
ಅಕ್ಷರ ಗಾತ್ರ

ಕಾರ್ಗಲ್: ಪ್ರಸ್ತುತದಿನಗಳಲ್ಲಿ ಭಾರಿ ಚರ್ಚೆಯಾಗುತ್ತಿರುವ ತಳಕಳಲೆ ಮಂಕಿ ಪಾರ್ಕ್ ಯೋಜನೆಯನ್ನು ಕೈ ಬಿಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಇಲ್ಲಿನ ಕೆಪಿಸಿ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಕೆಪಿಸಿ ಮತ್ತು ಪ್ರವಾಸೋದ್ಯಮ ಇಲಾಖೆಯಹಿರಿಯಅಧಿಕಾರಿಗಳೊಂದಿಗೆ ನಡೆಸಿದ
ಸಭೆಯಲ್ಲಿ ಬುಧವಾರ ಮಾತನಾಡಿದರು.

ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವಋತು ಪ್ರವಾಸಿ ತಾಣವಾಗಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಲಿಂಗನಮಕ್ಕಿ ಅಣೆಕಟ್ಟೆಯಿಂದ ಜಲಪಾತಕ್ಕೆ ನೀರು ಹರಿಸಲು ನಿರ್ಧರಿಸಲಾಗಿದೆ. ವಿಸ್ತೃತವಾದ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಪ್ರಥಮ ಹಂತದಲ್ಲಿ ₹ 120 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT