ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 9ರಂದು ಬೆಳಿಗ್ಗೆ 6 ಗಂಟೆಗೆ ನಗರದಲ್ಲಿ ಮ್ಯಾರಥಾನ್ ಹಮ್ಮಿಕೊಂಡಿದ್ದು, ಮಹಿಳೆಯರಿಗೆ 5 ಕಿ.ಮೀ ಹಾಗೂ ಪುರುಷರಿಗೆ 10 ಕಿ.ಮೀ. ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’, ‘ಎಲ್ಲರಿಗಾಗಿ ಫಿಟ್ ನೆಸ್’ ಮತ್ತು ‘ಮಾದಕ ದ್ರವ್ಯ ಮುಕ್ತ ಕರ್ನಾಟಕ’ ಧ್ಯೇಯ ವಾಕ್ಯದೊಂದಿಗೆ ಮ್ಯಾರಥಾನ್ ನಡೆಸಲಾಗುತ್ತಿದೆ. ಮ್ಯಾರಥಾನ್ ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭವಾಗಿ ಅಶೋಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘ ವೃತ್ತ, ಡಿವಿಎಸ್ ವೃತ್ತ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐಬಿ ವೃತ್ತದ ಮೂಲಕ ಮತ್ತೆ ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯಗೊಳ್ಳಲಿದೆ. ಪುರುಷರಿಗೆ ಇದೇ ಮಾರ್ಗದಲ್ಲಿ 10 ಕೆ ಮ್ಯಾರಥಾನ್ 2 ಸುತ್ತುಗಳಲ್ಲಿ ನಡೆಯಲಿದೆ.

ಮ್ಯಾರಥಾನ್ನಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಪುರುಷ ಮತ್ತು ಮಹಿಳೆಯರಿಗೆ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ಮತ್ತು ಪದಕಗಳನ್ನು ನೀಡಲಾಗುವುದು.
ಆಸಕ್ತರು ಮಾರ್ಚ್ 8ರಂದು ಮಧ್ಯಾಹ್ನ 2 ಗಂಟೆಯ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ ದೂರವಾಣಿ ಸಂಖ್ಯೆ: 9480803309, 9480803332 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.