ಶಿವಮೊಗ್ಗ: ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿದರೆ ವೈರಸ್ಸಂಪೂರ್ಣ ಹೊಡೆದೋಡಿಸಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಮಾಸ್ಕ್ ಡೇ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿದ ಬಳಿಕಅವರು ಮಾತನಾಡಿದರು.

ಎಲ್ಲರ ಸಹಕಾರಕಾರಣ ಕೊರೊನಾ ಹರಡುವಿಕೆ ಯಶಸ್ವಿಯಾಗಿ ತಡೆಯಲು ಸಾಧ್ಯವಾಗಿದೆ. ಇತರ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ವೈರಸ್ ಹರಡುವಿಕೆ ಯಶಸ್ವಿಯಾಗಿ ನಿಭಾಯಿಸಲು ಸಾಧ್ಯ. ನಿಯಂತ್ರಣಕ್ಕೆ ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಮಾಸ್ಕ್ ಧರಿಸುವುದು,ಅಂತರ ಕಾಪಾಡಿದ ಪರಿಣಾಮಶೇ 50ರಷ್ಟುವೈರಸ್ ನಿಯಂತ್ರಣಕ್ಕೆ ಬಂದಿದೆ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೈಗಳನ್ನು ಸಾಬೂನಿನಿಂದ ತೊಳೆಯಬೇಕು ಎಂದು ಸಲಹೆ ನೀಡಿದರು.

ನಗರ ಪಾಲಿಕೆ ಮೇಯರ್ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯಿತಿಸಿಇಒಎಂ.ಎಲ್.ವೈಶಾಲಿ,ಹೆಚ್ಚುವರಿಜಿಲ್ಲಾಧಿಕಾರಿ ಜಿ.ಅನುರಾಧ, ನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಜಾಥಾದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.