ಶಿವಮೊಗ್ಗ: ಆನ್‌ಲೈನ್ ಮೂಲಕ ಔಷಧ ವಹಿವಾಟು ವಿರೋಧಿಸಿ ಜಿಲ್ಲೆಯಲ್ಲೂ ಶುಕ್ರವಾರ ಔಷಧ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಮಾಲೀಕರು ಮತ್ತು ನೌಕರರುಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಆನ್‌ಲೈನ್ ಮೂಲಕ ಔಷಧ ವ್ಯಾಪಾರಕ್ಕೆ ಉತ್ತೇಜನ ನೀಡಿದರೆ ಸಾಂಪ್ರದಾಯಿಕವಾಗಿ ಅದೇ ವೃತ್ತಿ ಮಾಡಿಕೊಂಡು ಬಂದವರಿಗೆ ಅನ್ಯಾಯವಾಗುತ್ತದೆ. ಸಾಕಷ್ಟು ಬಂಡವಾಳ ಹಾಕಿ ಅಂಗಡಿ ತೆರೆದು ಔಷಧ ವ್ಯಾಪಾರ ನಡೆಸುತ್ತಿರುವ ಲಕ್ಷಾಂತರ ಕುಟುಂಬಗಳು ಬೀದಿಗೆ ಬರುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆನ್‌ಲೈನ್ ಔಷಧ ಖರೀದಿಸಿದರೆ ರೋಗಿಗಳಿಗೆ ಸಮರ್ಪಕ ಮಾಹಿತಿ ದೊರೆಯುವುದಿಲ್ಲ. ವಿರೋಧದ ಮಧ್ಯೆಯೂ ಕೇಂದ್ರ ಸರ್ಕಾರ ಆನ್‌ಲೈನ್ ಮೂಲಕ ಔಷಧ ವ್ಯವಹಾರ ಕಾನೂನುಬದ್ದಗೊಳಿಸಲು ಮುಂದಾಗಿದೆ. ಇದು ಸರಿಯಲ್ಲ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.