ವಿಶೇಷವಾಗಿ ಅಹಿತಕರ ಘಟನೆಗಳು ಸಂಭವಿಸುವ ಸ್ಥಳ, ವರ್ತುಲಗಳು, ಕಡಿದಾದ ತಿರುವು, ನಿರ್ಮಿಸಲೇ ಬೇಕಾದ ತಡೆಗೋಡೆಗಳು, ಪರ್ಯಾಯ ಮಾರ್ಗಗಳು, ರಸ್ತೆ ವಿಸ್ತರಣೆ ಮುಂತಾದ ಸಂಗತಿಗಳನ್ನು ಕ್ರಿಯಾ ಯೋಜನೆಯಲ್ಲಿ ಪರಿಗಣಿಸುವಂತೆ ಸಲಹೆ ನೀಡಿದ ಅವರು, ಪ್ರಸ್ತಾವನೆ ಸಲ್ಲಿಸುವ ಮೊದಲು ಸಂಬಂಧಿಸಿದ ಠಾಣೆಗಳ ಪೊಲೀಸ್ ಅಧಿಕಾರಿಗಳ ಸಲಹೆ-ಮಾರ್ಗದರ್ಶನ ಪಡೆದುಕೊಳ್ಳುವಂತೆಯೂ ತಿಳಿಸಿದರು.
ಇದಕ್ಕೆ ಪೂರಕವಾಗಿ ಸರ್ಕಾರವು ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭೂಕುಸಿತ ತಡೆಗಟ್ಟುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಲು ಮಾರ್ಗಸೂಚಿ ಹೊರಡಿಸಿದೆ. ಈ ಸಮಿತಿಯಲ್ಲಿ ಎಸ್ಪಿ, ಸಿಇಒ, ಡಿಸಿಎಫ್ ಸೇರಿದಂತೆ 13 ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಿಸುವಂತೆ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ವಿಭಾಗದ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಎನ್.ಹೇಮಂತ್, ಎಎಸ್ಪಿ ಎ.ಎಸ್.ಕಾರಿಯಪ್ಪ ಉಪಸ್ಥಿತರಿದ್ದರು.