ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಆರೋಗ್ಯ ಸೇವೆಗಳಿಗೆ ತೆರೆದ ಮೆಗ್ಗಾನ್‌ ಬಾಗಿಲು

ಜೂನ್‌ 11ರಿಂದ ಆರಂಭ, ವೈದ್ಯರ ಮೇಲೆ ನಿಗಾ ಇಡಲು ಮೂವರ ಸಮಿತಿ
Last Updated 8 ಜೂನ್ 2020, 9:59 IST
ಅಕ್ಷರ ಗಾತ್ರ

ಶಿವಮೊಗ್ಗ:ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಮೀಸಲಾಗಿದ್ದ ಮೆಗ್ಗಾನ್‌ ಜಿಲ್ಲಾ ಆಸ್ಪತ್ರೆಯನ್ನು ಜೂನ್‌ 11ರಿಂದ ಎಲ್ಲ ಆರೋಗ್ಯ ಸೇವೆಗಳಿಗೂ ಮುಕ್ತಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪಹೇಳಿದರು.

ಶಿವಮೊಗ್ಗ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಸೋಮವಾರ ನಡೆದ ಜನಪ್ರತಿನಿಧಿಗಳು, ಹಿರಿಯ ವೈದ್ಯರ ಸಭೆಯ ನಂತರ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಕೊರೊನಾದ ಹರಡುತ್ತಿದ್ದ ಆರಂಭದ ದಿನಗಳಲ್ಲಿ ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಇಡೀ ಆಸ್ಪತ್ರೆ ಮೀಸಲಿಡಲಾಗಿತ್ತು. ಹಾಗಾಗಿ, ಆಸ್ಪತ್ರೆಯ ಇತರೆ ವಿಭಾಗಗಳ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗುತ್ತಿತ್ತು. ಗುರುವಾರದಿಂದ ಎಲ್ಲ ಸೇವೆಗಳನ್ನೂ ಮೆಗ್ಗಾನ್‌ ಆಸ್ಪತ್ರೆಯಲ್ಲೇ ನೀಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿಇದುವರೆಗೂ 69 ಕೋವಿಡ್ರೋಗಿಗಳು ಪತ್ತೆಯಾಗಿದ್ದಾರೆ. 29ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 40ಜನರುಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕೋವಿಡ್‌ ಬ್ಲಾಕ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ, ಮೆಗ್ಗಾನ್ ಆಸ್ಪತ್ರೆಉಳಿದ ಬ್ಲಾಕ್‌ಗಳಲ್ಲಿ ಮೊದಲಿನಂತೆ ಇತರೆ ಎಲ್ಲಾ ಚಿಕಿತ್ಸೆಗಳಿನ್ನೂ ಆರಂಭಿಸಲಾಗುತ್ತಿದೆ. ಯಾವುದೇ ಚಿಕಿತ್ಸೆಗಾಗಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗುವುದಿಲ್ಲ ಎಂದು ಖಚಿತಪಡಿಸಿದರು.

ಮೆಗ್ಗಾನ್‍ನಲ್ಲಿ 16 ಡಯಾಲಿಸಿಸ್ ಯಂತ್ರಗಳು ಕಾರ್ಯನಿರ್ವಹಿಸುತ್ತಿವೆ.ಜೂನ್‌ 13ರಿಂದಪೂರ್ಣ ಪ್ರಮಾಣದ ಡಯಾಲಿಸಿಸ್ ಸೇವೆ ಮೆಗ್ಗಾನ್‍ನಲ್ಲಿ ಆರಂಭವಾಗಲಿದೆ ಎಂದುವಿವರ ನೀಡಿದರು.

ಗೈರು ಹಾಜರಾದರೆ ಕ್ರಮ:

ವೈದ್ಯಕೀಯಕಾಲೇಜಿನಲ್ಲಿ 130 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಬಹುತೇಕ ವೈದ್ಯರು ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ.ಕೇವಲ ಸಹಿ ಮಾಡಿ ಹೋಗುತ್ತಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳು ರೋಗಿಗಳನ್ನು ನೋಡಿಕೊಳ್ಳುತ್ತಿದ್ದಾರೆ.ಕರ್ತವ್ಯದಲ್ಲಿರಬೇಕಾದ ವೈದ್ಯರು ವಾಟ್ಸ್‌ಟ್ಯಾಪ್‌ಮೂಲಕ ಈ ವಿದ್ಯಾರ್ಥಿಗಳಿಗೆ ಸೂಚನೆ ನೀಡುತ್ತಿದ್ದಾರೆ. ಈ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ. ಎಲ್ಲವೈದ್ಯರು ಕಡ್ಡಾಯವಾಗಿಕರ್ತವ್ಯದಸಮಯದಲ್ಲಿ ಆಸ್ಪತ್ರೆಯಲ್ಲಿರಬೇಕು. ಅವರ ಮೇಲೆನಿರ್ದೇಶಕರು ನಿಗಾ ವಹಿಸಬೇಕು.ವೈದ್ಯರ ಹಾಜರಾತಿಗೆ ಫೇಸ್ ರೀಡಿಂಗ್ ಯಂತ್ರ ಖರೀದಿಸಬೇಕು. ಕರ್ತವ್ಯದಲ್ಲಿರುವ ವೈದ್ಯರ ಪಟ್ಟಿ ಪ್ರತಿದಿನ ಪ್ರಕಟಿಸಬೇಕು. ಆಡಳಿತ ಮಂಡಳಿಯ ಮೂವರುನಾಮನಿರ್ದೇಶಿತ ಸದಸ್ಯರ ಸಮಿತಿ ರಚಿಸಬೇಕು ಎಂದು ಸಚಿವರು ಸೂಚಿಸಿದರು.

ಬೇರೆ ಆಸ್ಪತ್ರೆಗಳಿಗೆ ಶಿಫಾರಸು ಸಲ್ಲದು:

ಔಷಧಗಳನ್ನು ವೈದ್ಯರು ಹೊರಗೆ ಖರೀದಿಸಲು ಚೀಟಿ ಬರೆದುಕೊಡಬಾರದು. ಮೆಗ್ಗಾನ್‍ನಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ಬೇರೆ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸಬೇಕಿದ್ದರೆ, ಆಯಾ ವಿಭಾಗದ ಮುಖ್ಯಸ್ಥರು ಮಾತ್ರ ಶಿಫಾರಸು ಮಾಡಬೇಕು.ಖಾಸಗಿಆಂಬುಲೆನ್ಸ್‌ಗಳುಮೆಗ್ಗಾನ್ ಆವರಣದ ಒಳಗೆ ಬಾರದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಶಾಶಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್‌, ಆರ್.ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒಎಂ.ಎಲ್.ವೈಶಾಲಿ, ಆಡಳಿತ ಮಂಡಳಿ ಸದಸ್ಯರಾದ ದಿವಾಕರ ಶೆಟ್ಟಿ, ಡಾ.ವಾಣಿ ಕೋರಿ, ಡಾ.ಗೌತಮ್,ನಿರ್ದೇಶಕ ಡಾ.ಗುರುಪಾದಪ್ಪ, ಜಿಲ್ಲಾ ಸರ್ಜನ್ ಡಾ.ಆರ್‌.ರಘನಂದನ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT