ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡೆದ ವಿದ್ಯೆ ಬಡವರಿಗೆ ಉಪಯೋಗವಾಗಬೇಕು: ಸಚಿವ ಕೆ.ಎಸ್.ಈಶ್ವರಪ್ಪ ಬುದ್ಧಿ ಮಾತು

Last Updated 13 ಜೂನ್ 2020, 14:40 IST
ಅಕ್ಷರ ಗಾತ್ರ

ಶಿವಮೊಗ್ಗ:ರೋಗಿಗಳಿಗೆ ಅನುಕೂಲವಾಗುವ ರೀತಿ ವೈದ್ಯರು ಕೆಲಸ ಮಾಡಬೇಕು. ಪಡೆದ ವಿದ್ಯೆ ಬಡವರಿಗೆ ಉಪಯೋಗವಾಗಬೇಕು. ಮೆಗ್ಗಾನ್ ಸೇವೆ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾ ಉಸ್ತುವಾರಿಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಮೆಗ್ಗಾನ್‌ಆಸ್ಪತ್ರೆ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವೈದ್ಯರ ಜತೆಗಿನ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಮೆಗ್ಘಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಯಾವುದೇ ಲೋಪವಾಗದಂತೆ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.

ಶಾಸಕ ಆರಗಜ್ಞಾನೇಂದ್ರಮಾತನಾಡಿ, ಮೆಗ್ಗಾನ್ ಆಸ್ಪತ್ರೆಗೆ ಬರುವ ಹೆಚ್ಚಿನ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳಿಸಲಾಗುತ್ತಿದೆ. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿಯೇ ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು. ಲೋಪಗಳನ್ನು ಗುರುತಿಸಿ ಎಲ್ಲ ವಿಭಾಗಗಳಿಗೂಅಗತ್ಯ ವೈದ್ಯರ ನೇಮಕ ಮಾಡಬೇಕು ಎಂದುಸಲಹೆ ನೀಡಿದರು.

ಮೆಗ್ಗಾನ್ ಬೋಧನಾ ಆಸ್ಪತ್ರೆ. ವಿದ್ಯಾರ್ಥಿಗಳಿಗೆ ಪಾಠ ಮಾಡಿ ಚಿಕಿತ್ಸೆ ನೀಡುವುದು ಕಷ್ಟವಾಗುತ್ತಿದೆ ಎಂಬ ವೈದ್ಯರು ಪ್ರತಿಕ್ರಿಯೆಗೆ ಆಕ್ಷೇಪವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಇಲ್ಲಿ ಪಾಠ ಮಾಡಿ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಹೇಗೆ ಸಮಯ ಸಿಗುತ್ತದೆ ಎಂದು ಪ್ರಶ್ನಿಸಿದರು.

ಹಲವು ವೈದ್ಯರು ನಿಯಮ ಉಲ್ಲಂಘಿಸಿ, ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಿರಿಯ ವೈದ್ಯರಿಗೆ ಇಲ್ಲಿನ ರೋಗಿಗಳನ್ನು ನೋಡಿಕೊಳ್ಳಲು ಸೂಚಿಸುತ್ತಾರೆ.ಇಂತಹ ವೈದ್ಯರ ವಿರುದ್ಧದೂರು ಬಂದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮೇಯರ್ ಸುವರ್ಣಾಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಸಿಇಒ ಎಂ.ಎಲ್‌.ವೈಶಾಲಿ, ಆಸ್ಪತ್ರೆ ಸಲಹಾ ಸಮಿತಿ ಸದಸ್ಯರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ್ ಶೆಟ್ಟಿ, ಜಿಲ್ಲಾ ಸರ್ಜನ್ ಡಾ.ರಘುನಂದನ್ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT