ಸಾಗರ: ನಗರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಿಯಾಶೀಲ ಕಾರ್ಯಚಟುವಟಿಕೆ ಅಗತ್ಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

ಇಲ್ಲಿನ ನಗರ ಕಾಂಗ್ರೆಸ್ ವತಿಯಿಂದ 25 ಮತ್ತು 27ನೇ ವಾರ್ಡ್‍ನಲ್ಲಿ ಆಯೋಜಿಸಿದ್ದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಪಕ್ಷವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ರಾಜ್ಯವ್ಯಾಪಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನ ಹೆಚ್ಚು ಪ್ರೇರಣಾದಾಯಕವಾಗಲಿದೆ’ ಎಂದರು.

‘ನಾನು ಶಾಸಕ ಹಾಗೂ ಸಚಿವನಾಗಿದ್ದಾಗ ಜನರಿಗೆ ಭೂಮಿಹಕ್ಕು ಕೊಡುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆಸಿದ್ದೇನೆ. ನಗರವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ಹಕ್ಕುಪತ್ರ ನೀಡುವ ಕೆಲಸ ರಾಜ್ಯದಲ್ಲಿಯೇ ಮಾದರಿಯಾಗಿತ್ತು. ಅಂತಹ ಕೆಲಸಗಳು ನಿರಂತರವಾಗಿ ನಡೆಯಬೇಕು. ಇಂತಹ ಕೆಲಸವಾಗಬೇಕಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು’ ಎಂದು ತಿಳಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಮಾತನಾಡಿ, ‘ಸರ್ಕಾರದ ಯೋಜನೆಗಳು ಜನರಿಗೆ ಸರಿಯಾಗಿ ತಲುಪುತ್ತಿಲ್ಲ. ಅನೇಕ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಜನರಿಗೆ ಸರಿಯಾಗಿ ಮಾಹಿತಿ ಇಲ್ಲ. ಇನ್ನು ಕೆಲವು ಸಾಮಾಜಿಕ ಭದ್ರತಾ ಯೋಜನೆಗಳು ಅರ್ಹರಿಗೆ ತಲುಪುತ್ತಿಲ್ಲ. ಪಕ್ಷ ಇದರ ಬಗ್ಗೆ ಗಮನ ಹರಿಸಲಿದೆ. ಅರ್ಹರಿಗೆ ಯೋಜನೆಯ ಫಲ ತಲುಪಿಸುವ ನಿಟ್ಟಿನಲ್ಲಿ ಹೋರಾಟ ರೂಪಿಸಲಿದೆ ಎಂದರು.

ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್. ಸುರೇಶಬಾಬು, ಪುರಸಭೆ ಮಾಜಿ ಅಧ್ಯಕ್ಷ ಮಕ್ಬೂಲ್ ಅಹ್ಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಧುಮಾಲತಿ ಮಾತನಾಡಿದರು. ನಗರಸಭೆ ಮಾಜಿ ಅಧ್ಯಕ್ಷ ಗಣಾಧೀಶ್, ಪ್ರಮುಖರಾದ ರೇಷ್ಮಾ ಕೌಸರ್, ಹಮೀದ್, ಪ್ರಕಾಶ್, ಸದ್ದಾಂ, ಚಂದ್ರಣ್ಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.