ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿಗಾರಿಕೆ ನಿಷೇಧ: ಶಿಫಾರಸ್ಸಿಗೆ ಸಿದ್ಧತೆ

ಪಶ್ಚಿಮಘಟ್ಟಗಳ ಸೂಕ್ಷ್ಮ ವಲಯದಲ್ಲಿ ಅಕ್ರಮ ಗಣಿಗಾರಿಕೆ: ಗೋವಿಂದ ಜಟ್ಟಪ್ಪ ನಾಯ್ಕ
Last Updated 27 ಸೆಪ್ಟೆಂಬರ್ 2022, 4:32 IST
ಅಕ್ಷರ ಗಾತ್ರ

ಶಿವಮೊಗ್ಗ: ’ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಕಂಡುಬಂದಿದೆ. ಅಧಿಕಾರಿಗಳನ್ನು ಕೇಳಿದರೆ ಗಮನಕ್ಕೆ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ಸೂಕ್ಷ್ಮ ಪರಿಸರ ವಲಯದಲ್ಲಿ ಗಣಿಗಾರಿಕೆ ಸಂಪೂರ್ಣ ನಿಷೇಧಿಸುವಂತೆ ಸರ್ಕಾರಕ್ಕೆ ವರದಿ ನೀಡಲು ಸಿದ್ಧತೆ ನಡೆಸಿದ್ದೇವೆ‘ ಎಂದು ಪಶ್ಚಿಮಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಅಧ್ಯಕ್ಷ ಗೋವಿಂದ ಜಟ್ಟಪ್ಪ ನಾಯ್ಕ ತಿಳಿಸಿದರು.

ಹೊಸನಗರ ಹಾಗೂ ಸಾಗರ ತಾಲ್ಲೂಕಿನ ಎರಡು ಕಡೆ ಸೂಕ್ಷ್ಮ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಕೆಲವು ಕಡೆ ಅನುಮತಿ ಪಡೆದು ಗಣಿಗಾರಿಕೆ ಮಾಡುತ್ತಿದ್ದು, ಅದರಿಂದಲೂ ಸೂಕ್ಷ್ಮ ವಲಯಕ್ಕೆ ತೊಂದರೆ ಆಗುತ್ತಿದೆ. ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಅರಣ್ಯಾಧಿಕಾರಿ ಗಳಿಗೆ ಸೂಚನೆ ನೀಡಿರುವೆ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಅಮೂಲ್ಯ ಔಷಧೀಯ ಸಸ್ಯಗಳು ಇದ್ದು, ಅವುಗಳನ್ನು ಉಳಿಸಿ–ಬೆಳೆಸಲು ಕ್ರಮ ಕೈಗೊಳ್ಳಬೇಕು. ಆ ನಿಟ್ಟಿನಲ್ಲಿ ಪಾರಂಪರಿಕ ವೈದ್ಯರನ್ನು ಗುರುತಿಸಿ ಗೌರವಿಸಲು ಹೇಳಿದ್ದೇನೆ’ ಎಂದರು.

ತುಂಗಾ ನದಿ 500 ದಶಲಕ್ಷ ಲೀಟರ್‌ ನೀರು ಶಿವಮೊಗ್ಗ ನಗರಕ್ಕೆ ಪೂರೈಕೆಯಾಗುತ್ತಿದೆ. ಆದರಲ್ಲಿ ಶೇ 5ರಿಂದ 10ರಷ್ಟು ಮಾತ್ರ ಬಳಕೆಯಾಗುತ್ತದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಉಳಿದದ್ದು, ಕೊಳಚೆ ರೂಪದಲ್ಲಿ
ತುಂಗಾ ನದಿಯನ್ನು ಸೇರುತ್ತದೆ. ಎಲ್ಲಿಯೂ ಎಸ್‌ಟಿಪಿ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೋವಿಂದ ಜಟ್ಟಪ್ಪ ನಾಯ್ಕ ಆ ಬಗ್ಗೆ ಸತ್ಯಾಸತ್ಯತೆ ಪರಿಶೀಲಿಸಿ ಕ್ರಮ ಕೈಗೊ್ಳ್ಳಲಾಗುವುದು ಎಂದರು.

ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶದ ಸಂರಕ್ಷಣೆ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ನೀಡುವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT