ಶಿವಮೊಗ್ಗ: ಹೆಚ್ಚುತ್ತಿರುವ ಮೊಬೈಲ್ ಫೋನ್ ಬಳಕೆಯಿಂದ ವಿದ್ಯಾರ್ಥಿಗಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗಿದೆ.

ಆರೋಗ್ಯಕ್ಕೆ ಒತ್ತು: ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲೆ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುತ್ತಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿಆರ್ಸಿ ಕೇಂದ್ರಗಳಲ್ಲಿ ತಲಾ ಒಬ್ಬ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು.

2026-27ನೇ ಸಾಲಿನಲ್ಲಿ ಶಾಲೆ- ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರ ಕೈಗೊಂಡು ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಒತ್ತು ನೀಡಿದೆ.

ವಿದ್ಯಾವಿಕಾಸ ಯೋಜನೆ ಅಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಜೊತೆಗೆ ಧಾರವಾಡದ ಐಐಟಿ ನೆರವಿನಿಂದ 8ನೇ ತರಗತಿಯಿಂದಲೇ ಕೃತಕ ಬುದ್ದಿಮತ್ತೆ (ಎಐ) ಕಲಿಕೆಗೆ ಬಜೆಟ್ನಲ್ಲಿ ಒತ್ತು ನೀಡಲಾಗುತ್ತಿದೆ. ಇದೊಂದು ಮಕ್ಕಳ ಸ್ನೇಹಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆಯೊಂದಿಗೆ ಹೊಸ ರೂಪು ಕೊಡಲು ನೆರವಾದ ಬಜೆಟ್ ಆಗಿದೆ.

– ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.