ಸೊರಬ: ‘ಶಾಲಾ ಮಕ್ಕಳ ಹಸಿವು ನೀಗಿಸುತ್ತಿರುವ ಅಕ್ಷರ ದಾಸೋಹ ಸಿಬ್ಬಂದಿಗಳ ಕಾರ್ಯ ತಾಯಿ ಸೇವೆ ಇದ್ದಂತೆ. ತಮ್ಮ ನಿಸ್ವಾರ್ಥ ಸೇವೆಯಿಂದ ಮಕ್ಕಳ ಪೌಷ್ಟಿಕಾಂಶ ವೃದ್ಧಿಸಲು ಶ್ರಮಿಸುತ್ತಿರುವ ಅವರ ಕರ್ತವ್ಯ ಅವಿಸ್ಮರಣೀಯ’ ಎಂದು ಶಾಲಾ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ರಾಜ್ ಕಲಾಕ್ಷೇತ್ರದಲ್ಲಿ ಭಾನುವಾರ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯ 2025-26ನೇ ಸಾಲಿನ ಅಕ್ಷರ ದಾಸೋಹ ನಿವೃತ್ತ ಅಡುಗೆ ಸಿಬ್ಬಂದಿಗೆ ಇಡುಗಂಟು ವಿತರಣೆ, ಸನ್ಮಾನ ಮತ್ತು ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರವು ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ನಿವೃತ್ತಿ ಸಂದರ್ಭದಲ್ಲಿ ₹ 40,000ದವರೆಗೆ ಇಡುಗಂಟು ನೀಡಲು ಅನುಮೋದನೆ ನೀಡಿದೆ. ಇದು ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಅಡುಗೆಯವರು ಮತ್ತು ಸಹಾಯಕರ ಆರ್ಥಿಕ ಭದ್ರತೆಗಾಗಿ ಕೈಗೊಂಡ ಪ್ರಮುಖ ನಿರ್ಧಾರವಾಗಿದ್ದು, ಜೊತೆಗೆ ಕನಿಷ್ಠ ವೇತನ ಮತ್ತು ಕಾಯಂ ನೌಕರರ ಸ್ಥಾನಮಾನಕ್ಕಾಗಿ ಬೇಡಿಕೆಗಳು ವ್ಯಕ್ತವಾಗುತ್ತಿವೆ. ಅಲ್ಲದೆ ಇಡುಗಂಟು ಹಣವನ್ನು ₹ 75,000ಕ್ಕೆ ಏರಿಸುವ ಬೇಡಿಕೆ ಇಟ್ಟಿದ್ದು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

‘ಸಿಬ್ಬಂದಿಗೆ ನೀಡುವ ವೇತನವನ್ನು ಹೆಚ್ಚಿಸುವ ಬೇಡಿಕೆ ಇಡಲಾಗಿದ್ದು, ರಾಜ್ಯ ಸರ್ಕಾರ ಈಗಾಗಲೇ ₹ 1,000 ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿಯ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ವೇತನ ಹೆಚ್ಚಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು’ ಎಂದರು.

ಇದೇ ವೇಳೆ ನಿವೃತ್ತರಾದ 16 ಜನ ಅಡುಗೆ ಸಿಬ್ಬಂದಿಗೆ ಸಾಂಕೇತಿಕವಾಗಿ ಇಡುಗಂಟಿನ ಚೆಕ್ ವಿತರಿಸಲಾಯಿತು. ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆದ ಅಡುಗೆ ಸಿಬ್ಬಂದಿಯ ಮಕ್ಕಳನ್ನು ಸನ್ಮಾನಿಸಲಾಯಿತು. ಮೀನುಗಾರಿಕೆ ಇಲಾಖೆ ರಾಜ್ಯ ವಲಯ ಹಾಗೂ ಜಿಲ್ಲಾ ಯೋಜನೆಯಡಿ ಫಲಾನುಭವಿಗಳಿಗೆ ಸಲಕರಣೆ ಕಿಟ್ ಹಾಗೂ ಹರಿಗೋಲು ವಿತರಿಸಲಾಯಿತು.

ಈ ವೇಳೆ ತಹಶೀಲ್ದಾರ್ ಕೆ.ಪುರಂದರ್, ಇಒ ಶಶಿಧರ್, ತಾ.ಪಂ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಜಯಶೀಲ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಪಿ. ರುದ್ರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಣ್ಣಪ್ಪ ಹಾಲಘಟ್ಟ, ಸದಾನಂದ ಗೌಡ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಕೃಷ್ಣಮೂರ್ತಿ, ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಅಧ್ಯಕ್ಷ ಕೆ.ವಿ. ಗೌಡ, ನಾಗರಾಜ್ ಚಿಕ್ಕಸವಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪುಷ್ಪಾ, ಅಕ್ಷರ ದಾಸೋಹ ನಿರ್ದೇಶಕ ಕೆ.ಸಿ. ಶ್ರೀಕಾಂತ್, ಪುರಸಭೆ ಮುಖ್ಯಾಧಿಕಾರಿ ಚಂದನ್, ಪರಶುರಾಮ್, ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಮಂಜುನಾಥ್ ಎಸ್, ಪ್ರಶಾಂತ್ ಮೇಸ್ತ್ರಿ, ಹೊನ್ನಪ್ಪ, ಗಣಪತಿ, ಈಶ್ವರ್ ಸಾರೇಮರೂರು ಬಸವೇಶ್ವರ ಸೇರಿದಂತೆ ಇತರರು ಇದ್ದರು.

‘ಬಸ್ ಸೇವೆ ಹೆಚ್ಚಿಸಲು ಕ್ರಮ’

‘ಗ್ಯಾರಂಟಿ ಯೋಜನೆಯ ಶಕ್ತಿ ಯೋಜನೆ ಮೂಲಕ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದು ತಾಲ್ಲೂಕಿನಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲು ಬೇಡಿಕೆಯಿದ್ದು ಸಚಿವ ರಾಮಲಿಂಗ ರೆಡ್ಡಿ ಅವರ ಬಳಿ ಚರ್ಚಿಸಿ ಹೆಚ್ಚುವರಿ ಬಸ್ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಶಾಲಾ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಪೌಷ್ಟಿಕಾಂಶ ವೃದ್ಧಿಸುವ ನಿಟ್ಟಿನಲ್ಲಿ 5 ದಿನ ಮೊಟ್ಟೆ ವಿತರಿಸಲಾಗುತ್ತಿದ್ದು ಮಕ್ಕಳ ಪೋಷಣೆಗೆ ಆದ್ಯತೆ ನೀಡಲಾಗುತ್ತಿದೆ. ಶಾಲಾ ಅತಿಥಿ ಶಿಕ್ಷಕರಿಗೆ ₹2000 ವೇತನ ಹೆಚ್ಚಿಸಲಾಗಿದ್ದು ಅವರನ್ನು ಕಾಯಂಗೊಳಿಸುವ ಅಧಿಕಾರ ಸರ್ಕಾರಕ್ಕಿಲ್ಲ. ಇದೀಗ 15 ಸಾವಿರ ಶಿಕ್ಷಕರ ನೇಮಕ ಮಾಡುವಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ’ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.