ಗುರುವಾರ , ಡಿಸೆಂಬರ್ 1, 2022
20 °C

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಂತೈಸಿದ ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಿಪ್ಪನ್‌ಪೇಟೆ: ಹೊಂಬುಜ ಸಮೀಪದ ಗುಂಡಿಬೈಲಿನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಹಸುವನ್ನು ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದು ಸಾಗರ ತಾಲ್ಲೂಕಿನ ಬರದಹಳ್ಳಿಯ ನಿವಾಸಿ ಹಾಲಸ್ವಾಮಿ ಗಾಯಗೊಂಡಿದ್ದಾರೆ.

ಈ ವೇಳೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿ, ಸಂತೈಸಿದರು. ಹೆಚ್ಚಿನ ಚಿಕಿತ್ಸೆಗೆ ತಮ್ಮದೇ ಬೆಂಗಾವಲು ಪಡೆಯ ವಾಹನದಲ್ಲಿ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು. 

ಸಚಿವರ ಮಾನವೀಯ ನಡೆಗೆ ನಾಗರಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು