ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ | ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ: ಸುರೇಶ್ ಕುಮಾರ್

ಪರೀಕ್ಷಾ ಪೂರ್ವ ಸಿದ್ಧತೆಗಳ ಪರಿಶೀಲನಾ ಸಭೆ
Last Updated 9 ಜೂನ್ 2020, 14:01 IST
ಅಕ್ಷರ ಗಾತ್ರ

ಶಿವಮೊಗ್ಗ:ಮಕ್ಕಳ ಸುರಕ್ಷತೆ ಪ್ರಮುಖ ಆದ್ಯತೆನೀಡುವುದಾಗಿಹೈಕೋರ್ಟ್‍ಗೆ ಸರ್ಕಾರ ಭರವಸೆ ನೀಡಿದೆ.ನೀಡಿದ ಭರವಸೆಯಂತೆಜೂನ್ 25ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು.ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವ ವಾತಾವರಣ ಇರಬೇಕು ಎಂದು ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ಹೇಳಿದರು.

ಜಿಲ್ಲಾ ಪಂಚಾಯಿತಿಸಭಾಂಗಣದಲ್ಲಿ ಮಂಗಳವಾರ ನಡೆದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಿದ್ಧತೆಗಳನ್ನುಪರಿಶೀಲನೆ ನಡೆಸಿದರು.

ಒಂದು ಕೊಠಡಿಗೆ 18 ಮಕ್ಕಳು:ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಡ ಎಂದು ಕೆಲವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು. ನ್ಯಾಯಾಲಯ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಕೋರ್ಟ್‌ ನೀಡಿದ ಸೂಚನೆ ಪಾಲಿಸಲಾಗುವುದು.ಪರೀಕ್ಷಾಕೊಠಡಿಯಲ್ಲಿ18ಕ್ಕಿಂತ ಹೆಚ್ಚು ಮಕ್ಕಳು ಇರಬಾರದು. ದೊಡ್ಡ ಕೊಠಡಿ ಇದ್ದರೆ 20 ಮಕ್ಕಳಿಗಷ್ಟೇ ಅವಕಾಶ ನೀಡಬೇಕು. ಮಾರ್ಗಸೂಚಿ ಪ್ರಕಾರ ಅಂತರವನ್ನು ಕಾಯ್ದುಕೊಳ್ಳಬೇಕು. ಪ್ರತಿ ಮಕ್ಕಳು ಪ್ರವೇಶ ಪತ್ರ ಪಡೆಯುವಾಗಲೇಮಾಸ್ಕ್ ವಿತರಿಸಬೇಕು.ಪರೀಕ್ಷೆ ಮುಗಿದ ಬಳಿಕ ಮಕ್ಕಳು ಗುಂಪಾಗಿ ಸೇರದಂತೆಎಚ್ಚರಿಕೆವಹಿಸಬೇಕು. ಪ್ರತಿದಿನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುವುದು.ಸಮಸ್ಯೆ ಕಂಡು ಬಂದರೆ ಮೊದಲೇ ನಿಗದಿಪಡಿಸಿದ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಎಲ್ಲಾ ಶಾಲೆಗಳಿಗೆ ಈಗಾಗಲೇ ಸ್ಯಾನಿಟೈಸರ್ ಒದಗಿಸಲಾಗಿದೆ ಎಂದು ವಿವರ ನೀಡಿದರು.

ಮಧ್ಯಾಹ್ನದ ಬಿಸಿಯೂಟ ಸ್ಥಳೀಯ ನಿರ್ಧಾರ:ಪರೀಕ್ಷೆ ಆರಂಭವಾಗುವ ಎರಡು ದಿನಗಳ ಮೊದಲು ಪರೀಕ್ಷಾ ಕೇಂದ್ರಗಳ ಸ್ಯಾನಿಟೈಜೇಶನ್ ಮಾಡಬೇಕು. ಪರೀಕ್ಷೆ ಮುಗಿದ ಬಳಿಕ ಪ್ರತಿದಿನ ಪುನರಾವರ್ತಿಸಬೇಕು. ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಎಲ್ಲಾ ಮುನ್ನೆಚ್ಚರಿಕೆ ವಹಿಸಬೇಕು. ಹೆಚ್ಚುವರಿಯಾಗಿ ಕೈಗವಸು ಧರಿಸಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಕುಡಿಯುವ ನೀರು ತೆಗೆದುಕೊಂಡು ಬರುವಂತೆ ಸೂಚನೆ ನೀಡಬೇಕು. ಮಧ್ಯಾಹ್ನ ಬಿಸಿಯೂಟ ಒದಗಿಸುವ ಕುರಿತು ಸ್ಥಳೀಯವಾಗಿಯೇ ನಿರ್ಧಾರ ಕೈಗೊಳ್ಳಬಹುದು. ಶಾಲಾ ಕೊಠಡಿಗಳಲ್ಲಿಊಟ ನೀಡಬಾರದು ಎಂದು ಸೂಚಿಸಿದರು.

ಮೂರು ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪರೀಕ್ಷೆ ಸುಗಮವಾಗಿ ನಡೆಯಲು ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿಕೈಗೊಂಡಿರುವ ಪೂರ್ವಸಿದ್ಧತೆಗಳ ಮಾಹಿತಿ ನೀಡಿದರು.

ಶಾಸಕ ಅರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿಅಧ್ಯಕ್ಷೆ ಜ್ಯೋತಿ ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸಿಇಒ ಎಂ.ಎಲ್.ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT