ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ: ಕಾಂಗ್ರೆಸ್ ಸದಸ್ಯೆಯಿಂದ ಅನುಚಿತ ವರ್ತನೆ: ಆರೋಪ

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಆರೋಪ
Last Updated 4 ಫೆಬ್ರುವರಿ 2023, 6:44 IST
ಅಕ್ಷರ ಗಾತ್ರ

ಸಾಗರ: ‘ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯೆ ಎನ್.ಲಲಿತಮ್ಮ ಅವರು ಇತರ ಸದಸ್ಯರಿಗೆ ಮಾತನಾಡಲು ಅವಕಾಶ ನೀಡದೆ ಅನುಚಿತವಾಗಿ ವರ್ತಿಸುತ್ತಿದ್ದಾರೆ’ ಎಂದು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಆರೋಪಿಸಿದರು.

‘ಕಳೆದ ಗುರುವಾರ ನಡೆದ ಸಭೆಯಲ್ಲಿ ಅನಗತ್ಯವಾಗಿ ಪ್ರಧಾನಿ ಮೋದಿ ಹಾಗೂ ರಾಜ್ಯ ಸರ್ಕಾರದ ವಿಷಯವನ್ನು ಎಳೆದು ತರುವ ಮೂಲಕ ಲಲಿತಮ್ಮ ಅವರು ಅಸಂಬದ್ಧವಾಗಿ ಮಾತನಾಡಿದ್ದಾರೆ. ನಗರಸಭೆಯ ಮಾಜಿ ಅಧ್ಯಕ್ಷರಿಂದ ಇಂತಹ ವರ್ತನೆ ನಿರೀಕ್ಷಿಸಿರಲಿಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

’ಸಭೆಯ ವಿಷಯಸೂಚಿಯಂತೆ ಎಲ್ಲಾ ವಿಷಯಗಳು ತೀರ್ಮಾನವಾದ ನಂತರವೇ ಸಭೆಯನ್ನು ಮುಕ್ತಾಯಗೊಳಿಸಲಾಗಿದೆ. ಆದರೂ ಆಡಳಿತದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ದಾಖಲೆ ಸಮೇತ ಯಾವುದಾದರೂ ಆರೋಪ ಮಾಡಿದರೆ ಈ ಬಗ್ಗೆ ತನಿಖೆ ನಡೆಸಲು ನಗರಸಭೆ ಆಡಳಿತ ಸಿದ್ಧ’ ಎಂದರು.

‘ನಗರಸಭೆಯಲ್ಲಿ ವಿರೋಧ ಪಕ್ಷ ಸತ್ತು ಹೋಗಿದೆ. ಇಲ್ಲಿನ ಇಂದಿರಾ ಕ್ಯಾಂಟೀನ್ ಅವ್ಯವಹಾರವನ್ನು ಆಡಳಿತ ಪಕ್ಷದ ಸದಸ್ಯರೇ ಬೆಳಕಿಗೆ ತರುವ ಸನ್ನಿವೇಶ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿಯಾಗಿರುವ ಲಲಿತಮ್ಮ ವಿವೇಚನೆಯಿಂದ ಮಾತನಾಡುವುದನ್ನು ಕಲಿಯಬೇಕು’ ಎಂದು ನಗರಸಭೆ ಸದಸ್ಯ ಕೆ.ಆರ್.ಗಣೇಶ್ ಪ್ರಸಾದ್ ಹೇಳಿದರು.

‘ಸರ್ಕಾರಿ ಆಸ್ಪತ್ರೆಗೆ ಊಟ ಪೂರೈಸುವ ಗುತ್ತಿಗೆ ವ್ಯವಹಾರದಲ್ಲಿ ನನ್ನ ಮೇಲೆ ಲಲಿತಮ್ಮ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ಯಾವುದೇ ತನಿಖೆ ಎದುರಿಸಲು ಸಿದ್ಧ’ ಎಂದು ಅವರು ಸವಾಲು ಹಾಕಿದರು.

ನಗರಸಭೆಯ ವಿ. ಮಹೇಶ್, ಅರವಿಂದ ರಾಯ್ಕರ್, ಆರ್.ಶ್ರೀನಿವಾಸ್, ಪ್ರೇಮಾ ಕಿರಣ್ ಸಿಂಗ್, ಸವಿತಾ ವಾಸು, ಉಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT