ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾಳಕೊಪ್ಪ: ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ

Published 9 ಜುಲೈ 2024, 15:51 IST
Last Updated 9 ಜುಲೈ 2024, 15:51 IST
ಅಕ್ಷರ ಗಾತ್ರ

ಶಿರಾಳಕೊಪ್ಪ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. 

‘ಅನಾರೋಗ್ಯ ಪೀಡಿತ ಜನರಿಗೆ ಉತ್ತಮ ಸೇವೆಯನ್ನು ವೈದ್ಯರು ನೀಡಬೇಕು. ಅನವಶ್ಯಕವಾಗಿ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸ್ಸು  ಮಾಡಬಾರದು. ಸಾಧ್ಯವಾದಷ್ಟು ಸರ್ಕಾರಿ ಆಸ್ಪತ್ರೆಯಲ್ಲಿಯೇ ಬಡವರಿಗೆ ಚಿಕಿತ್ಸೆ ನೀಡಬೇಕು. ಆರೋಗ್ಯ ಸಿಬ್ಬಂದಿ ಜನರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ಮಾಡಿದರೆ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು. 

ಅನಾರೋಗ್ಯ ಪೀಡಿತರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಡೆಂಗಿ ಚಿಕಿತ್ಸಾ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ನೂತನವಾಗಿ ನಿರ್ಮಾಣವಾಗುತ್ತಿರುವ 50 ಹಾಸಿಗೆಯ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. 

ಪುರಸಭೆ ಮಾಜಿ ಅಧ್ಯಕ್ಷ ರಟ್ಟಿಹಳ್ಳಿ ಲೋಕೇಶ್, ಎಚ್.ಎಂ. ಚಂದ್ರಶೇಖರ್, ರವಿ ಶಾನ್ ಭಾಗ, ವೈದ್ಯಾಧಿಕಾರಿ ಮಹಾಲಿಂಗಪ್ಪ ಕೊಳ್ಳೆ, ತಾಲ್ಲೂಕು  ಪಂಚಾಯಿತಿ ಮಾಜಿ ಅಧ್ಯಕ್ಷ ಶಂಭು, ಮಳವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್, ಹುಲಗಿನಕೊಪ್ಪ ಯೋಗೀಶ್ ಸೇರಿದಂತೆ ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT