ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ತೇಜೋವಧೆ: ದೂರು

Published 23 ಮೇ 2024, 15:44 IST
Last Updated 23 ಮೇ 2024, 15:44 IST
ಅಕ್ಷರ ಗಾತ್ರ

ಸಾಗರ: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲ್ಲಿನ ನಗರ ಪೊಲೀಸ್ ಠಾಣೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ಸಿ.ಎಂ. ಗುರುವಾರ ದೂರು ನೀಡಿದ್ದಾರೆ.

ಈಚೆಗೆ ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮದರ್ಜೆ ಕಾಲೇಜು ಕಟ್ಟಡದ ಮುಂಭಾಗದಲ್ಲಿನ ಅಂಗಡಿಯಲ್ಲಿ ಗುಟ್ಕಾ, ಸಿಗರೇಟ್ ಮಾಡುತ್ತಿದ್ದಾಗ ಶಾಸಕ ಬೇಳೂರು ಗಿರಾಕಿಯ ಸೋಗಿನಲ್ಲಿ ಅಲ್ಲಿಗೆ ತೆರಳಿ ತಂಬಾಕು ಉತ್ಪನ್ನವನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಹೀಗೆ ವೈರಲ್ ಆದ ವಿಡಿಯೊಗೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ‘ಖದೀಮ ಕಾಂಗ್ರೆಸ್’ ಎಂಬ ಹೆಸರಿನ ಖಾತೆಯ ಮೂಲಕ ಬೇಳೂರು ವಿರುದ್ಧ ಅವಹೇಳನಕಾರಿ ಸಂದೇಶ ಹರಿಯಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT