ಸಾಗರ: ಕೊರೊನಾದಿಂದ ಚೇತರಿಸಿಕೊಂಡ ನಂತರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಎಚ್. ಹಾಲಪ್ಪ ಹರತಾಳು ಅವರು ಗುಣಮುಖರಾಗಿದ್ದಾರೆ.
ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾದ ಅವರು, ‘ವೈದ್ಯರ ಸಲಹೆ ಮೇರೆಗೆ ಮೂರು ವಾರಗಳ ಕಾಲ ವಿಶ್ರಾಂತಿಯಲ್ಲಿ ಇರುತ್ತೇನೆ’ ಎಂದು ತಿಳಿಸಿದ್ದಾರೆ.