ಸಾಗರ: ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಭೆಗಳನ್ನು ನಡೆಸುವ ಮೂಲಕ ಶಾಸಕ ಹರತಾಳು ಹಾಲಪ್ಪ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್ ದೂರಿದ್ದಾರೆ.

ಕಳೆದ ನ. 11ರಂದು ಶಾಸಕ ಹಾಲಪ್ಪ ಅವರು ನಗರಸಭೆ ಅಧ್ಯಕ್ಷರ ಕೊಠಡಿಯಲ್ಲಿ ತಹಶೀಲ್ದಾರ್, ನಗರಸಭೆ ಆಯುಕ್ತರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈಚೆಗೆ ಪಡವಗೋಡು ಗ್ರಾಮ ಪಂಚಾಯಿತಿಯಲ್ಲಿ ಶಾಸಕ ಹಾಲಪ್ಪ ಅವರು ಸಭೆ ನಡೆಸಿರುವುದು ಕೂಡ ನಿಯಮದ ಉಲ್ಲಂಘನೆಯಾಗಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.