ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ನೈತಿಕ ಹೊಣೆಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ’

Published : 28 ಸೆಪ್ಟೆಂಬರ್ 2024, 15:41 IST
Last Updated : 28 ಸೆಪ್ಟೆಂಬರ್ 2024, 15:41 IST
ಫಾಲೋ ಮಾಡಿ
Comments

ಶಿವಮೊಗ್ಗ: ‘ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು’ ಎಂದು ಶಾಸಕ ಎಸ್‌.ಎನ್‌. ಚನ್ನಬಸಪ್ಪ ಒತ್ತಾಯಿಸಿದರು.

ಹೈಕೋರ್ಟ್‌ ಆದೇಶದ ಮೇರೆಗೆ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಾಗಿದೆ. ಕುಟುಂಬದವರು ಸೇರಿ ಅಕ್ರಮ ಮಾಡಿದ್ದಾರೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕಿದೆ. ಬಿಜೆಪಿ ಜನರಿಗೆ ಅಕ್ರಮ ತಿಳಿಸುವಂತಹ ಪ್ರಯತ್ನ ಮಾಡುತ್ತಿದೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಮುಂದುವರಿದರೆ ನ್ಯಾಯ ಸಿಗುವುದಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಹಗರಣದಲ್ಲಿ ಸಿಎಂ ಪಾತ್ರವಿಲ್ಲ ಎಂದು ಕೆಲವು ಸಚಿವರು ಹೇಳಿಕೆ ನೀಡುತ್ತಿದ್ದಾರೆ. ಇವರೇ ನ್ಯಾಯಾಧೀಶರಾಗಿದ್ದಾರೆ. ಪ್ರಕರಣದ ತನಿಖೆಗೆ ನ್ಯಾಯಾಲಯ ಇದೆ’ ಎಂದರು.

‘ನಗರದಲ್ಲಿ ಒಂದು ಲಕ್ಷ ಸದಸ್ಯತ್ವ ಗುರಿ ಹೊಂದಿದ್ದು, 60,000 ಸದಸ್ಯರನ್ನು ನೋಂದಣಿ ಮಾಡಲಾಗಿದೆ. ಪ್ರಧಾನಿ ಮೋದಿ ಮತ್ತು ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ, ನೇತ್ರ ತಪಾಸಣೆ ಶಿಬಿರ, ಆರೋಗ್ಯ ಶಿಬಿರ ಮಾಡಲಾಗಿದೆ. ಒಂದು ಸಾವಿರ ಸಸಿಗಳನ್ನು ನೆಡಲಾಗಿದೆ’ ಎಂದು ಬಿಜೆಪಿ ನಗರ ಘಟಕ ಅಧ್ಯಕ್ಷ ಮೋಹನ್ ರೆಡ್ಡಿ ಹೇಳಿದರು.

ಬೊಮ್ಮನಕಟ್ಟೆಯ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಸೆಪ್ಟಂಬರ್ 29ರಂದು ಆರೋಗ್ಯ ತಪಾಸಣೆ ಉಚಿತ ಶಿಬಿರ ನಡೆಯಲಿದೆ. ಬಿಜೆಪಿ ಒಬಿಸಿ ಘಟಕದಿಂದ ದೇವಸ್ಥಾನದ ಆವರಣದ ಸ್ವಚ್ಛತೆ ಕೈಗೊಳ್ಳಲಾಗುವುದು. ಅಕ್ಟೋಬರ್‌ 2ರಂದು ಎಸ್.ಸಿ, ಎಸ್‌ಟಿ ಮೋರ್ಚಾದಿಂದ‌ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. 

ಎನ್.ಜೆ. ನಾಗರಾಜ್, ಕೆ.ವಿ. ಅಣ್ಣಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT