ಶಿವಮೊಗ್ಗ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ವೈ.ಎಚ್.ನಾಗರಾಜ್ ನಾಮಪತ್ರ ವಾಪಸ್ ಪಡೆದಿದ್ದು, ಅಧಿಕೃತ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಹಾದಿ ಸುಗಮವಾಗಿದೆ. ಬಿಜೆಪಿ ಡಿ.ಎಸ್.ಅರುಣ್ ಸೇರಿದಂತೆ ಕಣದಲ್ಲಿ ಐವರು ಅಭ್ಯರ್ಥಿಗಳಿದ್ದಾರೆ.

ನಾಳೆ ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ಅಂತಿಮವಾಗಿ ಕಣದಲ್ಲಿ ಉಳಿಯುವವರ ಪಟ್ಟಿ ಸಿದ್ಧವಾಗಲಿದೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆದಿರುವೆ ಎಂದು ಕಾಂಗ್ರೆಸ್ ಸೇವಾದಳದ ಅಧ್ಯಕ್ಷರೂ ಆದ ವೈ.ಎಚ್.ನಾಗರಾಜ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಪಕ್ಷ ತಮಗೆ ಟಿಕೆಟ್ ನೀಡುವ ಭರವಸೆಯಿಂದ ನಾಮಪತ್ರ ಸಲ್ಲಿಸಿದ್ದೆ. ಹಾಲಿ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಅವರಿಗೆ ಬಿ ಫಾರಂ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಸೇವಾದಳದ ಅಧ್ಯಕ್ಷ ರಾಮಚಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಅವರ ಸೂಚನೆಯ ಮೇರೆಗೆ ಈ ನಿರ್ಧಾರ ತೆಗೆದುಕೊಂಡಿರುವೆ. ಪಕ್ಷದ ಅಧಿಕೃತ ಅಭ್ಯರ್ಥಿ ಪರ ಪ್ರಚಾರ ನಡೆಸಲಾಗುವುದು. ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.