ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸ್ಥಾನಕ್ಕೆ ಡಿ.10ರಂದು ಚುನಾವಣೆ ನಡೆಯಲಿದ್ದು, ಟಿಕೆಟ್ಗಾಗಿ ಕಾಂಗ್ರೆಸ್, ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ.

2015ರಲ್ಲಿ ನಡೆದ ಚುನಾವಣೆಯಲ್ಲಿ ಅಂದು ವಿಧಾನ ಪರಿಷತ್ ಸದಸ್ಯರಾಗಿದ್ದ ಬಿಜೆಪಿಯ ಆರ್.ಕೆ. ಸಿದ್ದರಾಮಣ್ಣ, ಕಾಂಗ್ರೆಸ್ನ ಆರ್. ಪ್ರಸನ್ನಕುಮಾರ್, ಜೆಡಿಎಸ್ ಅಭ್ಯರ್ಥಿ ನಿರಂಜನ್ ಮಧ್ಯೆ ತ್ರಿಕೋನ ಸ್ಪರ್ಧೆ ನಡೆದಿತ್ತು. ತೀವ್ರ ಪೈಪೋಟಿ ನಡೆದಿದ್ದ ಆ ಚುನಾವಣೆಯಲ್ಲಿ ಆರ್. ಪ್ರಸನ್ನಕುಮಾರ್ ಆಯ್ಕೆಯಾಗಿದ್ದರು. ಈ ಬಾರಿ ಕಾಂಗ್ರೆಸ್ನಿಂದ ಸ್ಪರ್ಧೆ ಬಯಸಿ ಪ್ರಸನ್ನಕುಮಾರ್ ಹಾಗೂ ವೈ.ಎಚ್. ನಾಗರಾಜ್ ಅರ್ಜಿ ಸಲ್ಲಿಸಿದ್ದಾರೆ. ಪ್ರಸನ್ನಕುಮಾರ್ ಅವರಿಗೇ ಮತ್ತೊಂದು ಬಾರಿ ಕಾಂಗ್ರೆಸ್ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.

ಬಿಜೆಪಿಯಲ್ಲಿ ಆಕಾಂಕ್ಷಿಗಳ ದೊಡ್ಡಪಟ್ಟಿಯೇ ಇದೆ. ಈ ಬಾರಿ ಸ್ಪರ್ಧೆ ಬಯಸಿ 7 ಮುಖಂಡರು ಟಿಕೆಟ್ ನೀಡುವಂತೆ ಕೋರಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯರಾದ ಆರ್.ಕೆ. ಸಿದ್ದರಾಮಣ್ಣ, ಎಂ.ಬಿ. ಭಾನುಪ್ರಕಾಶ್, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್, ರಾಜ್ಯ ಕ್ರೀಡಾ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷ ಗಿರೀಶ್ ಪಟೇಲ್, ಸತೀಶ್ ಬೇಗಾನೆ ಸ್ಪರ್ಧೆ ಬಯಸಿದ್ದಾರೆ.

ಈ ಬಾರಿಯೂ ಜೆಡಿಎಸ್ ಅಚ್ಚರಿಯ ಅಭ್ಯರ್ಥಿ ಕಣಕ್ಕೆ ಇಳಿಸುವುದೇ ಎನ್ನುವ ಕುತೂಹಲವಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅನಿರೀಕ್ಷಿತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ತೀವ್ರ ಪೈಪೋಟಿ ನೀಡಿತ್ತು. ಅದೇ ತಾನೆ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಹುದ್ದೆಯಿಂದ ನಿವೃತ್ತರಾಗಿದ್ದ ನಿರಂಜನ್ ಅವರನ್ನು ಕರೆತಂದು ಕಣಕ್ಕೆ ಇಳಿಸಲಾಗಿತ್ತು. ನಿರಂಜನ್ ಬಿಜೆಪಿ ಅಭ್ಯರ್ಥಿಗಿಂತ ಅಧಿಕ ಮತ ಪಡೆದು ಅಚ್ಚರಿ ಮೂಡಿಸಿದ್ದರು. ಸೋಲಿನ ನಂತರ ಅವರು ಪಕ್ಷದಿಂದ ವಿಮುಖರಾಗಿದ್ದರು. ಈ ಬಾರಿಯೂ ಹೊಸಮುಖದ ಹುಡುಕಾಟದಲ್ಲಿ ಜೆಡಿಎಸ್ ನಿರತವಾಗಿದ್ದು, ಅನಿರೀಕ್ಷಿತ ಅಭ್ಯರ್ಥಿ ಕಣಕ್ಕೆ ಇಳಿಸುವ ಆಲೋಚನೆಯಲ್ಲಿದೆ.

10 ತಾಲ್ಲೂಕು ವ್ಯಾಪ್ತಿಯ ಕ್ಷೇತ್ರ: ಅವಿಭಜಿತ ಶಿವಮೊಗ್ಗ ಜಿಲ್ಲೆಯನ್ನು ಈ ಕ್ಷೇತ್ರ ಒಳಗೊಂಡಿದೆ. ಈಗಿನ ಶಿವಮೊಗ್ಗದ ಏಳು ತಾಲ್ಲೂಕುಗಳು, ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳ ಎಲ್ಲ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಮತದಾರರಾಗಿದ್ದಾರೆ. ಆದರೆ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಅವಧಿ ಮುಗಿದಿರುವ ಕಾರಣ ಈ ಬಾರಿ ಗ್ರಾಮ ಪಂಚಾಯಿತಿ ಸದಸ್ಯರ ಮತಗಳೇ ನಿರ್ಣಾಯಕವಾಗಿವೆ. ಒಟ್ಟು 4093 ಮತದಾರರು ಇದ್ದಾರೆ.

ಸಚಿವ ಈಶ್ವರಪ್ಪ ಅವರಿಗೆ ಪ್ರತಿಷ್ಠೆಯ ಕಣ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಜಿಲ್ಲೆಯವರೇ ಆದ ಕಾರಣ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಹಿಂದಿನ ಚುನಾವಣೆಯ ಸೋಲು ತೀರಿಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಆಕಾಂಕ್ಷಿಗಳ ದೊಡ್ಡಪಟ್ಟಿ ಇರುವುದು ಅಭ್ಯರ್ಥಿಯ ಸುಲಭ ಆಯ್ಕೆಗೆ ತೊಡಕಾಗಿದೆ.

ಕೋಟ್...

ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರು ಅಧಿಕ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ಕಾಂಗ್ರೆಸ್ಗೆ ಅನುಕೂಲವಾಗುವ ಸಾಧ್ಯತೆ ಇದೆ.

ಎಚ್.ಎಸ್. ಸುಂದರೇಶ್, ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಘಟಕ

ಈ ಬಾರಿಯೂ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು. ಗ್ರಾಮ ಪಂಚಾಯಿತಿ ಸದಸ್ಯರು ಯಾವ ಪಕ್ಷದವರೂ ಅಲ್ಲ. ವ್ಯಕ್ತಿಯ ವ್ಯಕ್ತಿತ್ವ ನೋಡಿ ಮತಚಲಾಯಿಸುವರು.

ಎಂ. ಶ್ರೀಕಾಂತ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಜೆಡಿಎಸ್

ಆಕಾಂಕ್ಷಿಗಳ ಪಟ್ಟಿ ದೊಡ್ಡದಿರಬಹುದು. ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಎಲ್ಲರೂ ಶ್ರಮಿಸುವೆವು.

ಟಿ.ಡಿ. ಮೇಘರಾಜ್, ಅಧ್ಯಕ್ಷ, ಜಿಲ್ಲಾ ಬಿಜೆಪಿ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.