ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ವಿಧಾನ ಪರಿಷತ್‌ ಚುನಾವಣೆ; ಮತದಾನ ನಾಳೆ

ಮತಪೆಟ್ಟಿಗೆಯೊಂದಿಗೆ ಕೇಂದ್ರಗಳಿಗೆ ತೆರಳಿದ ಸಿಬ್ಬಂದಿ
Published 2 ಜೂನ್ 2024, 16:12 IST
Last Updated 2 ಜೂನ್ 2024, 16:12 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಅಂಗವಾಗಿ ಸೋಮವಾರ ಮತದಾನ ನಡೆಯಲಿದೆ.

ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ನಗರದ ಮಹಾನಗರ ಪಾಲಿಕೆ ಆವರಣದಲ್ಲಿನ ಮಸ್ಟರಿಂಗ್‌ ಕೇಂದ್ರದಿಂದ ಮತಪೆಟ್ಟಿಗೆಗಳನ್ನು ತೆಗೆದುಕೊಂಡು ಮತದಾನ ಕೇಂದ್ರಗಳಿಗೆ ತೆರಳಿದರು. 

ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ನೈರುತ್ಯ ಪದವೀಧರ ಒಟ್ಟು ಮತದಾರರು 27,412 ಇದ್ದಾರೆ. ಒಟ್ಟು 38 ಮತದಾನ ಕೇಂದ್ರಗಳಿವೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 4,365 ಮತದಾರರು ಇದ್ದಾರೆ. 32 ಮತಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮತದಾರರು ತಮ್ಮ ಮತವಿರುವ ಮತದಾನ ಕೇಂದ್ರದ ವ್ಯಾಪ್ತಿಯಲ್ಲಿ ಮತ ಚಲಾಯಿಸಬಹುದಾಗಿದೆ.

ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ 200 ಮೀ. ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮತದಾನ ಮಾಡಲು ಚುನಾವಣಾ ಆಯೋಗ ಸೂಚಿಸಿರುವ ಭಾವಚಿತ್ರ ಇರುವ ಯಾವುದೇ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದು. ಸುಗಮವಾಗಿ ಮತದಾನ ನಡೆಯಲು ಜಿಲ್ಲಾಡಳಿತವು ಅಗತ್ಯ ಕ್ರಮ ಕೈಗೊಂಡಿದೆ.

ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತದಾನದ ಕೇಂದ್ರಗಳಿಗೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT