ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭದ್ರಾವತಿ | ಮೊಬೈಲ್ ಕಳ್ಳನ ಬಂಧನ: 15 ಮೊಬೈಲ್ ವಶ

Published 27 ಜೂನ್ 2024, 16:27 IST
Last Updated 27 ಜೂನ್ 2024, 16:27 IST
ಅಕ್ಷರ ಗಾತ್ರ

ಭದ್ರಾವತಿ: ಮೊಬೈಲ್‌ಗಳು ಕಾಣೆಯಾಗಿರುವ ಸಂಬಂಧ ಸಿ-ಪೋರ್ಟಲ್‌ನಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ವಿವಿಧ ಕಂಪನಿಗಳ 15 ಮೊಬೈಲ್‌ಗಳನ್ನು ಪತ್ತೆ ಹಚ್ಚುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಎಳನೀರು ವ್ಯಾಪಾರಿ ಮುಜಾಮಿಲ್ ಅಲಿಯಾಸ್ ಮುಜ್ಜು (19) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹ 28,999 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಪತ್ತೆಗೆ ನಗರ ವೃತ್ತ ನಿರೀಕ್ಷಕ ಶೈಲಕುಮಾರ್ ನೇತೃತ್ವದಲ್ಲಿ ಠಾಣಾ ಉಪ ನಿರೀಕ್ಷಕ ಶರಣಪ್ಪ ಹಂಡ್ರಗಲ್, ಸಿಬ್ಬಂದಿಯಾದ ಹಾಲಪ್ಪ, ನಾರಾಯಣಸ್ವಾಮಿ, ಮೌನೇಶ್ ಶೀಕಲ್, ಚಿಕ್ಕಪ್ಪ ಸಣ್ಣತಂಗೇರ ಮತ್ತು ಜಿ.ಎ ಪ್ರವೀಣ್ ಅವರನ್ನು ಒಳಗೊಂಡ ತನಿಖಾ ತಂಡ ರಚಿಸಲಾಗಿತ್ತು.

ಈ ತಂಡವು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಂಡದ ಸದಸ್ಯರನ್ನು ಅಭಿನಂದಿಸಿದ್ದಾರೆ.

ಸಿ-ಪೋರ್ಟಲ್‌ನಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ವಿವಿಧ ಕಂಪನಿಗಳ 15 ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿ-ಪೋರ್ಟಲ್‌ನಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ವಿವಿಧ ಕಂಪನಿಗಳ 15 ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT