ಶಿವಮೊಗ್ಗ:ಮಲೆನಾಡಿನಲ್ಲಿ ಮಂಗಗಳ ಹಾವಳಿ ನಿಯಂತ್ರಣಕ್ಕೆ ಮಂಕಿ ಪಾರ್ಕ್ (ಜೀವವೈವಿಧ್ಯ ವನ) ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದರು.

ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಆಗ್ರಹಿಸಿ ರೈತರು ಸೋಮವಾರ ನಡೆಸಿದ ಪ್ರತಿಭಟನೆಯ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಮಲೆನಾಡಿನ ಹಲವು ಭಾಗಗಳಲ್ಲಿ ಮಂಗಳ ಹಾವಳಿ ಮಿತಿ ಮೀರಿದೆ. ಅಪಾರ ಪ್ರಮಾಣದ ಬೆಳೆ ನಷ್ಟವಾಗುತ್ತಿದೆ. ಈ ಕುರಿತುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚಿಸಲಾಗುವುದು. ಅಸ್ಸಾಂನಲ್ಲಿ ಈ ರೀತಿಯ ಪ್ರಯೋಗ ಯಶಸ್ವಿಯಾಗಿದೆ. ಪಾರ್ಕ್‌ನಲ್ಲಿ ಅವುಗಳಿಗೆ ಅಗತ್ಯವಾದ ಎಲ್ಲ ಆಹಾರ ಸಿಗುವ ಪರಿಣಾಮ ಮಂಗಗಳ ಹಾವಳಿ ನಿಯಂತ್ರಣಕ್ಕೆ ಬಂದಿದೆ. ಅಲ್ಲಿಗೆ ಅಧ್ಯಯನ ತಂಡ ಕಳುಹಿಸಲಾಗುವುದು. ಅದೇ ಮಾದರಿಯಲ್ಲಿ ಮಂಕಿ ಪಾರ್ಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.