ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಜಿಲ್ಲೆಯಲ್ಲಿ ಮುಂದುವರಿದ ಮಳೆ, ಭದ್ರಾ ಜಲಾಶಯದಿಂದ ನೀರು ಹರಿಸಲು ಕ್ರಮ

Last Updated 14 ಜುಲೈ 2022, 5:36 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ ಮಳೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ ಅತಿ ಹೆಚ್ಚ 21.7 ಸೆ..ಮೀ ಮಳೆಯಾಗಿದೆ. ಹುಲಿಕಲ್‌ನಲ್ಲಿ 21.6 ಅಡಿ, ಮಾಸ್ತಿಕಟ್ಟೆಯಲ್ಲಿ 21.2 ಸೆಂ.ಮೀ ಮಳೆ ದಾಖಲಾಗಿದೆ.

ಭದ್ರಾ, ತುಂಗಾ, ಶರಾವತಿ, ವರದಾ, ಕುಮದ್ವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.

ಭದ್ರಾ ಜಲಾಶಯದಲ್ಲಿ 183.2 ಅಡಿಯಷ್ಟು ನೀರು ಇದ್ದು, ಜಲಾಶಯದ ಗರಿಷ್ಠ ಮಟ್ಟ 186 ಅಡಿ ಇದೆ. ಸದ್ಯ 43501 ಕ್ಯುಸೆಕ್ ಒಳಹರಿವು ಇದ್ದು, ಜಲಾಶಯದ ಸುರಕ್ಷತೆಯ ನಿಟ್ಟಿನಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ಕ್ರೆಸ್ಟ್ ಗೇಟ್ ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ.

ಲಿಂಗನಮಕ್ಕಿ ಜಲಾಶಯಕ್ಕೆ 56138 ಕ್ಯುಸೆಕ್ ಒಳಹರಿವು ಇದೆ. ಸದ್ಯ ಜಲಾಶಯದಲ್ಲಿ 1787.30 ಅಡಿ ನೀರು ಸಂಗ್ರಹವಾಗಿದೆ. ಗರಿಷ್ಠ ಮಟ್ಟ 1819 ಅಡಿ.

ಸಚಿವ ನಾರಾಯಣಗೌಡ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಗುರುವಾರ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದಲ್ಲಿ ಮನೆಗೆ ಕುಸಿದುಬಿದ್ದ ಮನೆ ಪರಿಶೀಲಿಸಿದರು. ಜಿಲ್ಲಾಡಳಿತದಿಂದ ₹ 10 ಸಾವಿರ ತುರ್ತು ಪರಿಹಾರ ಕೊಡಲಾಗಿದೆಯೇ ಎಂದು ಸಂತ್ರಸ್ತರನ್ನು ಕೇಳಿದರು. ಮನೆ ಕಟ್ಟಿಕೊಳ್ಳಲು ₹ 5 ಲಕ್ಷ ವಿತರಿಸುವಂತೆ ಜೊತೆಯಲ್ಲಿದ್ದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT