ಶನಿವಾರ, ಜುಲೈ 31, 2021
23 °C

ಮಾಸಿಕ ಪಿಂಚಣಿ ಜಮೆ ಮಾಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಅಂಗವಿಕಲರು, ವಿಧವೆಯರು ಹಾಗೂ ವೃದ್ದೆಯರಿಗೆ ಹಲವು ತಿಂಗಳಿನಿಂದ ಮಾಸಿಕ ಪಿಂಚಣಿ ಬಂದಿಲ್ಲ. ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೇಜಸ್ವಿನಿ ಮಹಿಳಾ ಸಂಘದ ಸದಸ್ಯರು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು.

ನಿತ್ಯವೂ ತಾಲ್ಲೂಕು ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಿಂಚಣಿ ಹಣಕ್ಕಾಗಿ ತಾಲ್ಲೂಕು ಕಚೇರಿಗೆ ನಿತ್ಯ 50 ರಿಂದ 100 ಪಿಂಚಣಿದಾರರು ಸಾಲಾಗಿ ನಿಲ್ಲುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಯಾವುದೇ ಅಂತರ ಕಾಯ್ದುಕೊಳ್ಳ ನಿಲ್ಲುತ್ತಿದ್ದಾರೆ. ಎಲ್ಲ ದಾಖಲೆಗಳನ್ನು ಈ ಮೊದಲು ನೀಡಿದ್ದರೂ, ಅಧಿಕಾರಿಗಳು ಮತ್ತೆ ಮತ್ತೆ ದಾಖಲೆಗಳಿಗಾಗಿ ಓಡಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕೆಲವರಿಗೆ ಪಿಂಚಣಿ ಮಂಜೂರಾತಿ ಆದೇಶ ಬಂದು 15 ತಿಂಗಳಾಗಿದ್ದರೂ ತಾಲ್ಲೂಕು ಆಡಳಿತ ಪಿಂಚಣಿ ಬಿಡುಗಡೆ ಮಾಡಿಲ್ಲ. ಪಿಂಚಣಿ ನಂಬಿಕೊಂಡವರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.

ಸಂಘದ ಅಧ್ಯಕ್ಷೆ ಸೀತಾಲಕ್ಷ್ಮಿ ಸತ್ಯನಾರಾಯಣ, ಮಂಜುಳಾ ಪಾಂಡೆ, ಕಲ್ಪನಾ ರಮೇಶ್, ಭಾಗ್ಯ, ಸುಶೀಲಮ್ಮ, ಶಾಂತಮ್ಮ ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು