ಗುರುವಾರ , ಮೇ 19, 2022
21 °C

ಹೊಸೂರಿನಲ್ಲಿ ಉಪಾಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನಂದಪುರ: ಸಮೀಪದ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಹಾರ ಸೇವಿಸಿದ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಂದಿತಳೆಯ ಹೊಸೂರಿನ ಶಾಖೆಯ ಆವರಣದಲ್ಲಿ ಶನಿವಾರ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನ ಗೋದಾಮು ಪೂಜೆ ಹಾಗೂ ಸಂಘದ ವಾರ್ಷಿಕ ಸಭೆ ನಡೆಸಲಾಗಿತ್ತು. ಕಾರ್ಯಕ್ರಮದ ನಂತರ ಉಪಾಹಾರ ನೀಡಲಾಗಿತ್ತು. ಉಪಾಹಾರ ಸೇವಿಸಿದ 100ಕ್ಕೂ ಹೆಚ್ಚು ಮಂದಿಯಲ್ಲಿ ಹೊಟ್ಟೆನೋವು, ವಾಂತಿ, ಸುಸ್ತು ಕಾಣಿಸಿಕೊಂಡಿದೆ. ಕೆಲವರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲವರು ಖಾಸಗಿ ಕ್ಲಿನಿಕ್ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜ್ ಮಾತನಾಡಿ, ‘ಕೇವಲ ಪುಲಾವ್ ಸೇವಿಸಿದವರಿಗೆ ಯಾವುದೇ ತೊಂದರೆ ಆಗಿಲ್ಲ. ಮೊಸರನ್ನ ಸೇವಿಸಿದವರಿಗೆ ಮಾತ್ರ ತೊಂದರೆಯಾಗಿದೆ. 750ಕ್ಕೂ ಹೆಚ್ಚು ಜನರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮುಂಜಾಗ್ರತೆ ವಹಿಸಬೇಕಾಗಿತ್ತು. ಚಿಕಿತ್ಸೆ ಬಗ್ಗೆಯೂ ವಿಶೇಷ ಕಾಳಜಿ ವಹಿಸಿಲ್ಲ’ ಎಂದು ಆರೋಪಿಸಿದರು.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಕಾಂತೇಶ್ ಮಾತನಾಡಿ, ‘ಆಹಾರದಲ್ಲಿನ ವ್ಯತ್ಯಾಸದಿಂದಾಗಿ ತೊಂದರೆ ಉಂಟಾಗಿದೆ. ದೊಡ್ಡ ಪ್ರಮಾಣದ ಅನಾಹುತ ಸಂಭವಿಸಿಲ್ಲ. ಚಿಕಿತ್ಸೆ ನೀಡಲಾಗುತ್ತಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು