ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

Last Updated 15 ಜನವರಿ 2022, 8:18 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರವೂ ಕೊರೊನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರ ಗಡಿ ದಾಟಿದೆ.

ಜಿಲ್ಲೆಯಲ್ಲಿ ಶುಕ್ರವಾರ 288 ಮಂದಿಗೆ ಕೊರೊನಾ ಸೋಂಕು ಬಂದಿದೆ. ಈ ಪೈಕಿ 121 ಮಂದಿ ಶಿವಮೊಗ್ಗ ತಾಲ್ಲೂಕಿಗೆ ಸೇರಿದ್ದಾರೆ. ಭದ್ರಾವತಿಯ 65, ತೀರ್ಥಹಳ್ಳಿಯ 10, ಶಿಕಾರಿಪುರದ 3, ಸಾಗರದ 39, ಹೊಸನಗರದ 37, ಸೊರಬದ 2 ಹಾಗೂ ಹೊರ ಜಿಲ್ಲೆಯಿಂದ ಬಂದ 11 ಮಂದಿಗೆ ಸೋಂಕು ತಗುಲಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1168ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 8 ಸೋಂಕಿತರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸಿಎಚ್‌ಸಿಯಲ್ಲಿ 35, ಹೋಮ್ ಐಸೊಲೇಷನ್‌ನಲ್ಲಿ 1058, ಟ್ರಯೇಜ್‌ನಲ್ಲಿ 29 ಮಂದಿ ಚಿಕಿತ್ಸೆಯಲ್ಲಿದ್ದಾರೆ. 99 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT