ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗುಂಬೆ ಘಾಟಿ: ಮಾರ್ಚ್ 5ರಿಂದ ಹಗಲು ಸಂಚಾರ ಬಂದ್

Last Updated 3 ಮಾರ್ಚ್ 2022, 13:40 IST
ಅಕ್ಷರ ಗಾತ್ರ

ಶಿವಮೊಗ್ಗ: ರಸ್ತೆ ದುರಸ್ತಿ ಕಾಮಗಾರಿ ಕಾರಣ ಮಾರ್ಚ್‌ 5ರಿಂದ 15ರವರೆಗೆ ಪ್ರತಿ ದಿನ ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಆಗುಂಬೆ ಘಾಟ್ ಮೂಲಕ ಸಾಗುವ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಆಗುಂಬೆ ಘಾಟಿಯ ತಪಾಸಣಾ ಕೇಂದ್ರದಿಂದ ಹೆಬ್ರಿವರೆಗೆ ₹ 5.25 ಕೋಟಿ ವೆಚ್ಚದಲ್ಲಿ 20 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಜೆ 7ರಿಂದ ಬೆಳಿಗ್ಗೆ 7ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಶಿವಮೊಗ್ಗದಿಂದ ತೀರ್ಥಹಳ್ಳಿ, ಆಗುಂಬೆ, ಉಡುಪಿ. ಮಂಗಳೂರು ಹೆದ್ದಾರಿಯಲ್ಲಿ ಸಂಚರಿಸುವ ಲಘು ವಾಹನಗಳು ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾ ಘಾಟಿ, ಕಾರ್ಕಳ ಮೂಲಕ ಉಡುಪಿ ತಲುಪಬಹುದು, ಭಾರಿ ವಾಹನಗಳು ಆಯನೂರು, ಆನಂದಪುರ, ಸಾಗರ, ಹೊನ್ನಾವರ ಮೂಲಕ ಸಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT