ಸಾಗರ: ಬಿಜೆಪಿ ಹಾಗೂ ಜೆಡಿಎಸ್ನ ಹೆಚ್ಚಿನ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸರ್ವಾಧಿಕಾರಿ ಧೋರಣೆಯಿಂದ ಆ ಪಕ್ಷದ ಬಹುತೇಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಜೆಡಿಎಸ್ ಒಡೆದ ಮನೆಯಾಗಿದ್ದು, ಅಲ್ಲಿನ ಶಾಸಕರೂ ಭ್ರಮ ನಿರಸನಗೊಂಡಿದ್ದಾರೆ ಎಂದರು.

ಸಾಗರ ಕ್ಷೇತ್ರದ ಕೆಲವು ಭಾಗಗಳಲ್ಲಿ ಆನೆ ದಾಳಿಯಿಂದ ರೈತರು ತೊಂದರೆ ಅನುಭವಿಸಿರುವ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ. ಆನೆ ದಾಳಿಯಿಂದ ರೈತರೊಬ್ಬರು ಮೃತಪಟ್ಟಿದ್ದು ಅವರಿಗೆ ಸರ್ಕಾರದಿಂದ ₹15 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ. ಆನೆ ಹಾವಳಿ ತಡೆಯಲು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪತ್ರಕರ್ತ ಉಮೇಶ್ ಮೊಗವೀರ ಅವರ ಚಿಕಿತ್ಸೆಗೆ ಬೇಳೂರು ₹25,000 ಸಹಾಯಧನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.