ತುಮರಿ: ‘ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರು ಇರುವುದರಿಂದ ಬಹು ನಿರೀಕ್ಷಿತ ಸಿಗಂದೂರು ಸೇತುವೆ ಕಾಮಗಾರಿ ವಿಳಂಬವಾಗುತ್ತಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ತಾಲ್ಲೂಕಿನ ತುಮರಿ ಸಮೀಪದ ಹೊಳೆಬಾಗಿಲಿನ ತಟದಲ್ಲಿ ನಡೆಯುತ್ತಿರುವ ಬಹು ಕೋಟಿ ವೆಚ್ಚದ ‘ಸಿಗಂದೂರು ಸೇತುವೆ’ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಅವರು ಮಾತನಾಡಿದರು.

‘ಈ ಸೇತುವೆ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದ್ದು, ಸುಮಾರು ₹423 ಕೋಟಿ ವೆಚ್ಚದಲ್ಲಿ ಸೇತುವೆ ಕಾಮಗಾರಿ ನಡೆುತ್ತಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಯಲಿದ್ದು, ಆತಂಕ ಪಡುವ ಅಗತ್ಯವಿಲ್ಲ’ ಎಂದರು.

ಸಂಸದರು ಹೊಳೆಬಾಗಿಲು ಲಾಂಚ್ನಲ್ಲಿಯೇ ಪ್ರಯಾಣಿಸಿ ಸೇತುವೆ ಕಾಮಗಾರಿ ಪ್ರಗತಿ ವೀಕ್ಷಿಸಿದರು. ಅವರು ಇದೇ ವೇಳೆ ರಾಣೆಬೇನ್ನೂರು– ಮರಕುಟಕ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766ರ ಡಿಪಿಆರ್ ಕಾಮಗಾರಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಿಮ್ಸ್ ನಿರ್ದೇಶಕ ದಿವಾಕರ ಶೆಟ್ಟಿ, ಎಂಎಸ್ಐಎಲ್ ನಿರ್ದೇಶಕರಾದ ವೆಂಕಟೇಶ್ ನಾಯ್ಡು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.