ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾಮಗಾರಿ ಮಂಜೂರಾತಿಗೆ ಸಿಎಂ ಬೊಮ್ಮಾಯಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

Last Updated 28 ಫೆಬ್ರುವರಿ 2022, 4:02 IST
ಅಕ್ಷರ ಗಾತ್ರ

ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿದರು.

ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯು ಸೆಪ್ಟೆಂಬರ್ ಅಂತ್ಯದೊಳಗೆ ಮುಕ್ತಾಯವಾಗಲಿದೆ. ನಿರ್ವಹಣೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎ.ಎ.ಐ)ದಿಂದ ಕೈಗೊಳ್ಳಲು ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಮಾರ್ಗಗಳನ್ನು ನಿಗದಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ವಿಮಾನಯಾನ ಸಚಿವರಿಗೆ ಪ್ರಸ್ತಾವ ಸಲ್ಲಿಸುವಂತೆ ಮನವಿ ಮಾಡಿದರು.

ಶಿವಮೊಗ್ಗ-ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ (ಶಿಮುಲ್) ವ್ಯಾಪ್ತಿಯಿಂದ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳನ್ನು ಬೇರ್ಪಡಿಸಿ ಹೊಸದಾಗಿ ಶಿವಮೊಗ್ಗ ಹಾಲು ಒಕ್ಕೂಟವನ್ನು ಪ್ರತ್ಯೇಕವಾಗಿ ಘೋಷಿಸಬೇಕು. ಶಿಮುಲ್ ಹಾಲಿನ ಪುಡಿ ತಯಾರಿಕಾ ಘಟಕವನ್ನು ಪ್ರಾರಂಭಿಸಲು ಬಜೆಟ್‌ನಲ್ಲಿ ₹ 50 ಕೋಟಿ ಅನುದಾನ ಮೀಸಲಿಡಬೇಕು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಂಶೋಧನಾ, ಕೌಶಲಾಭಿವೃದ್ಧಿ ಮತ್ತು ವಿಸ್ತರಣಾ ಕೇಂದ್ರ, ಉಡುಗಣಿ (ಉಡುತಡಿ), ಶಿಕಾರಿಪುರ ತಾಲ್ಲೂಕು ಇದಕ್ಕೆ ₹ 30 ಕೋಟಿ ವಿಶೇಷ ಅನುದಾನ ಮೀಸಲಿಡಬೇಕು. ಶಿವಮೊಗ್ಗದಲ್ಲಿ ನೂತನವಾಗಿ ಸ್ಥಾಪನೆ ಆಗಿರುವ ಆಯುಷ್ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ₹ 100 ಕೋಟಿ ಅನುದಾನ ಮೀಸಲಿಟ್ಟು, ಆಯವ್ಯಯದಲ್ಲಿ ಘೋಷಣೆ ಮಾಡಬೇಕು ಎಂದರು.

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ವಿಭಾಗಕ್ಕೆ ₹ 30 ಕೋಟಿ ಅನುದಾನ ಒದಗಿಸಬೇಕು. ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲಿ ನೂತನವಾಗಿ ಆರಂಭವಾಗಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ಯಾಂಪಸ್‌ನ ಮೂಲಸೌಲಭ್ಯ ಅಭಿವೃದ್ಧಿಗೆ ₹ 100 ಕೋಟಿ ಅನುದಾನ ಒದಗಿಸುವಂತೆ ಕೋರಿದರು.

ಕೇಂದ್ರದ ಪ್ರಾಯೋಜಕತ್ವದ ಎನ್.ಎಸ್.ಡಿ.ಎಫ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಕ್ರೀಡಾ ಅಕಾಡೆಮಿ ಸ್ಥಾಪಿಸಲು ಉದ್ದೇಶಿಸಿದ್ದು, ಇದಕ್ಕಾಗಿ ₹ 20 ಕೋಟಿ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT